Home Mangalorean News Kannada News ಪಾಣೆಮಂಗಳೂರು: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ

ಪಾಣೆಮಂಗಳೂರು: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ

Spread the love

ಪಾಣೆಮಂಗಳೂರು: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ

ಮಂಗಳೂರು: ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ.

ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್, ಅಂಗಿ ಮೊಬೈಲ್ ಮತ್ತು ಚಪ್ಪಲಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ದಳ, ಸ್ಥಳೀಯರ ಹಾಗೂ ಈಜುಪಟುಗಳ ನೆರವಿನಿಂದ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ರಮೇಶ್ ರೈ ಅವರು ಇತ್ತೀಚೆಗೆ ನಡೆದ ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನೆಲ್ಲಿಕಟ್ಟೆ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು.

ಅವರು ಸುಳ್ಯದಲ್ಲಿ ಮಂಗಳ ಡ್ರೈವಿಂಗ್ ಸ್ಕೂಲ್ ನ ಮಾಲಕರಾಗಿದ್ದರು. ಸಜ್ಜನ ರಾಜಕಾರಣಿ ಎಂದೇ ಚಿರಪರಿಚಿತರಾಗಿದ್ದರು. ಆರೋಗ್ಯ ಸಮಸ್ಯೆ ಅಥವಾ ಹಣಕಾಸಿನ ಸಮಸ್ಯೆಯಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಲಾಗುತ್ತಿದೆ.

ಪಾಣೆಮಂಗಳೂರು ಸೇತುವೆ ಬಳಿ ದೊರೆತ ಮೊಬೈಲ್‌ ನಿಂದ ಪೊಲೀಸರು ಕರೆ ಮಾಡಿದಾಗ, ಅದು ಪುತ್ತೂರಿನ ರಮೇಶ್ ರೈ ಅವರಿಗೆ ಸೇರಿದ್ದೆಂದು ತಿಳಿದುಬಂದಿತ್ತು. ಕೂಡಲೇ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಯಿತು. ಇದೀಗ ಕುಟುಂಬ ಸದಸ್ಯರು ಮೃತದೇಹವನ್ನು ಗುರುತಿಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಕುಟುಂಬ ವರ್ಗ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.


Spread the love

Exit mobile version