ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ
ಬಂಟ್ವಾಳ: ನಿನ್ನೆ ಹಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ ನಿಲ್ಲಿಸಿ ನಾಪತ್ತೆಯಾಗಿದ್ದ ಮಾರ್ನಬೈಲು ನಿವಾಸಿ ಆಟೋ ಚಾಲಕ ಪ್ರೀತಂ ಲೋಬೋ (35) ಅವರ ಮೃತದೇಹ ಇಂದು ನೇತ್ರಾವತಿ ನದಿಯ ಡ್ಯಾಂ ಸಮೀಪದ ಮರವೊಂದರಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ನದಿ ತೀರಕ್ಕೆ ತಂದು ಇಟ್ಟಿದ್ದಾರೆ. ನಿನ್ನೆ ಸಂಜೆ ವೇಳೆ ಪ್ರೀತಂ ಲೋಬೋ ಅವರು ತಮ್ಮ ಆಟೋವನ್ನು ಸೇತುವೆಯ ಬಳಿ ನಿಲ್ಲಿಸಿ ನಾಪತ್ತೆಯಾಗಿದ್ದರೆಂಬ ದೂರು ಕುಟುಂಬಸ್ಥರು ಪೊಲೀಸರಿಗೆ ನೀಡಿದ್ದರು. ಇಂದು ಬೆಳಿಗ್ಗೆ ಹುಡುಕಾಟದ ವೇಳೆ ನೇತ್ರಾವತಿ ನದಿಯ ತೀರದಲ್ಲಿ ಅವರ ಶವ ಪತ್ತೆಯಾಗಿದೆ.
