ಪಿಎಂಇಜಿಪಿ ಸಬ್ಸಿಡಿ ಸಾಲ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಮಹಿಳೆ ಬಂಧನ

Spread the love

ಪಿಎಂಇಜಿಪಿ ಸಬ್ಸಿಡಿ ಸಾಲ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಮಹಿಳೆ ಬಂಧನ

ಉಡುಪಿ: ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣದಲ್ಲಿ ಆರೋಪಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ಬ್ರಹ್ಮಾವರದ ಕೌಶಲ್ಯ ಎಂದು ಗುರುತಿಸಲಾಗಿದೆ

ಈಕೆ 2023ರ ನವೆಂಬರ್ ನಲ್ಲಿ ಬಾರಕೂರು ಹೇರಾಡಿಯ ಸರಿತಾ ಲೂವಿಸ್ ಎಂಬವರಿಗೆ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿದ್ದು ನಂತರದ ದಿನಗಳಲ್ಲಿ ಸಬ್ಸಡಿ ಲೋನ್ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಳು. ಅದರಂತೆ ಸರಿತಾ ಲೂವಿಸ್ ಹಂತ ಹಂತವಾಗಿ ಕೌಶಲ್ಯಳ ಖಾತೆಗೆ ಹಾಗೂ ಆಕೆಯ ತಿಳಿಸಿದ ವ್ಯಕ್ತಿಗಳಾದ ಆಕೆಯ ಗಂಡ ಸಂದೇಶ ಮತ್ತು ಪ್ರಕಾಶ, ಆಶೀಶ ಶೆಟ್ಟಿ, ರಾಜೇಂದ್ರ ಬೈಂದೂರು, ಗೀತ, ಹರಿಣಿ, ನವ್ಯ, ಕುಮಾರ್, ಮಾಲತಿ, ಪ್ರವೀಣ್, ಹರಿಪ್ರಸಾದ್, ನಾಗರಾಜ ಮತ್ತು ಭಾರತಿ ಸಿಂಗ್ ಎಂಬವರಿಗೆ ಒಟ್ಟು 80,72,000ರೂ. ಹಣ ನೀಡಿದ್ದರು ಎಂದು ದೂರಲಾಗಿದೆ.

ಅದೇ ರೀತಿ ಕೌಶಲ್ಯ, ಅಂಜಲಿನ್ ಡಿಸಿಲ್ವಾ ಎಂಬವರಿಗೂ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ ಸರಿತಾ ಲೂವಿಸ್ ಗೆ ತಿಳಿಸಿದ ವ್ಯಕ್ತಿಗಳ ಖಾತೆಗಳಿಗೆ 65,00,000ರೂ. ನಗದು ಹಣವನ್ನು ಪಾವತಿಸಿದ್ದರು. ಕೌಶಲ್ಯ ಇವರಿಬ್ಬರಿಗೆ ಒಟ್ಟು 4 ಕೋಟಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಹಾಗೂ ಬ್ಯಾಂಕ್ ನೌಕರ ಎಂದು ಪೋನ್ನಲ್ಲಿ ಮಾತನಾಡಿ ನಂಬಿಸಿ ಒಟ್ಟು 1,45,72,000ರೂ. ಹಣ ಪಡೆದು ಮೋಸ ಮಾಡಿರುವುದಾಗಿ ದೂರಲಾಗಿದೆ. ಅದರಂತೆ ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿ ಕೌಶಲ್ಯಳನ್ನು ಬಂಧಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments