ಪುತ್ತೂರು: ಅಕ್ರಮ ಗಾಂಜಾ ಸಾಗಾಟ – ಓರ್ವನ ಬಂಧನ

Spread the love

ಪುತ್ತೂರು: ಅಕ್ರಮ ಗಾಂಜಾ ಸಾಗಾಟ – ಓರ್ವನ ಬಂಧನ

ಪುತ್ತೂರು: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಸುಳ್ಯ ನಿವಾಸಿ ನಾಸಿರ್ (25) ಎಂದು ಗುರುತಿಸಲಾಗಿದೆ.

ಶನಿವಾರ ಸಂಜೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತ್ಯಾಗರಾಜನಗರ ಎಂಬಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು KA 02 MD 7384 ಬಿಳಿ ಬಣ್ಣದ ಬೊಲೆರೊ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಆರೋಪಿ ನಾಸೀರ್ ನನ್ನು ಬಂಧಿಸಿದ್ದು, ಬಂಧಿತನಿಂದ ಸುಮಾರು 4,000 ರೂ ಗಳ ಮೌಲ್ಯದ 200 ಗ್ರಾಂ ಗಾಂಜಾ ಹಾಗೂ ಸುಮಾರು 4,00,000 ಮೌಲ್ಯದ ಬೊಲೆರೊ ವಾಹನವನ್ನು ವಶಪಡಿಸಲಾಗಿದೆ

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love