ಪುತ್ತೂರು : ಆಗಾಗ ಹದಗೆಡುವ ಆರೋಗ್ಯ, ಜಿಗುಪ್ಸೆಗೊಂಡ ಯುವತಿ ಜೀವಾಂತ್ಯ..!
ಮಂಗಳೂರು: 22 ರ ಹರೆಯದ ಯುತಿಯೊಬ್ಬಳು ಜೀವನದಲ್ಲಿ ಜಿಗುಪ್ಸೆಗೊಂಡು ಜೀವಾಂತ್ಯ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ.
ನೀತಾ (22) ಜೀವಾಂತ್ಯ ಮಾಡಿಕೊಂಡ ಯುವತಿಯಾಗಿದ್ದಾಳೆ. ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು ಸಂಖ್ಯೆ ಪೊಲೀಸರಿಗೆ ದೂರು ನೀಡಿದ್ದಾರೆ. ‘ತಂದೆ ಗುಡ್ಡಪ್ಪ ಯವರು ಸುಮಾರು 20 ವರ್ಷಗಳ ಹಿಂದೆ ಕೌಟುಂಬಿಕ ಕಲಹದ ಕಾರಣದಿಂದ ದೂರವಿದ್ದುದರಿಂದ ಮನೆಯಲ್ಲಿ ತಾಯಿ ಮತ್ತು ಅಕ್ಕ, ತಂಗಿ ಮಾತ್ರ ಇದ್ದರು ಎನ್ನಲಾಗಿದೆ. ಬೆಳಿಗ್ಗೆ ತಾನು ಕೆಲಸದ ನಿಮಿತ್ತ ಮತ್ತು ತಂಗಿಗೆ ಔಷಧಿಯನ್ನು ತರಲೆಂದು ಅಕ್ಕ ಮಂಗಳೂರಿಗೆ ಹೊರಟ್ಟಿದ್ದಾಗ ನೀತಾ ಈ ಕೃತ್ಯ ಮಾಡಿದ್ದಾಳೆ ಎನ್ನಲಾಗಿದೆ. ಸಂಜೆ ಅಕ್ಕ ಮನೆಗೆ ಬಂದಾಗ ತಂಗಿ ಶಾಲಿನ ಒಂದು ತುದಿಯನ್ನು ಕಿಟಕಿಯ ಸರಳಿಗೆ ಕಟ್ಟಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮೃತ ನೀತಾ ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, 2016ರ ನಂತರ ಆಕೆಗೆ ತಲೆನೋವು ಆರಂಭವಾಗಿ ಚಿಕಿತ್ಸೆ ಪಡೆಯುತ್ತಿದ್ದರು. 2020ರ ನಂತರ ಕುತ್ತಿಗೆ, ಬೆನ್ನುಹುರಿ ಮತ್ತು ತಲೆಯಲ್ಲಿ ನರ ದೋಷ ಉಂಟಾದ ಕಾರಣ ಮಂಗಳೂರಿನ ಖಾಸಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಡೆಸಿ ಬಳಿಕ ಮಣಿಪಾಲ ಕೆಎಂಸಿ ಮತ್ತು ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದಳು. ಆದ್ರೆ ಆರೋಗ್ಯ ತೊಂದರೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜೀವಾಂತ್ಯ ಮಾಡಿಕೊಂಡಿರ ಬಹುದು ಎಂದು ಅಕ್ಕ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.
