ಪುತ್ತೂರು: ಕಾಂಕ್ರೀಟ್ ಮಿಕ್ಸಿಂಗ್ ವಾಹನದ ಅಡಿಗೆ ಬಿದ್ದು ಕಾರ್ಮಿಕ ಮಹಿಳೆ ಮೃತ್ಯು

Spread the love

ಪುತ್ತೂರು: ಕಾಂಕ್ರೀಟ್ ಮಿಕ್ಸಿಂಗ್ ವಾಹನದ ಅಡಿಗೆ ಬಿದ್ದು ಕಾರ್ಮಿಕ ಮಹಿಳೆ ಮೃತ್ಯು

ಪುತ್ತೂರು: ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದ ಅಡಿಗೆ ಬಿದ್ದು ಕಾರ್ಮಿಕ ಮಹಿಳೆಯೋರ್ವರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ಶುಕ್ರವಾರ ಸಂಜೆ ನಡೆದಿದೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ನಾಳ ಗ್ರಾಮದ ಬಸವರಾಜ ಎಂಬವರ ಪತ್ನಿ ಗೌರಮ್ಮ(28)ಮೃತಪಟ್ಟವರು.

ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜದಿಂದ ಬಿಲ್ವಗಿರಿ ಮೂಲಕ ಸಂಪರ್ಕ ಕಲ್ಪಿಸುವ ರಸ್ತೆಗೆ ಕಾಂಕ್ರಿಟೀಕರಣ ಕಾಮಗಾರಿಯು ಸುಮಾರು ಮೂರು ವಾರಗಳಿಂದ ನಡೆಯುತ್ತಿದ್ದು, ರಾಯಚೂರು ಮೂಲದ ಹಲವು ಮಂದಿ ಕಾರ್ಮಿಕರು ಇಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಶುಕ್ರವಾರ ಸಂಜೆ ಕೆಲಸ ಮಾಡುತ್ತಿರುವ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ಮಿಲ್ಲ‌ರ್ ವಾಹನ ಹಿಂದಕ್ಕೆ ಚಲಿಸುತ್ತಿದ್ದ ಸಂದರ್ಭದಲ್ಲಿ ಗೌರಮ್ಮ ಅವರು ಆಕಸ್ಮಿಕವಾಗಿ ವಾಹನದ ಚಕ್ರದಡಿಗೆ ಸಿಲುಕಿ ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಪತಿ, ಒಂದು ಹೆಣ್ಣು ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಸಂಪ್ಯ ಠಾಣಾ ಎಸ್‌.ಐ.ಜಂಬೂರಾಜ್ ಮಹಾಜನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತರ ಪತಿ ಬಸವರಾಜ ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love