ಪುತ್ತೂರು : ದಾಂಪತ್ಯ ಕಲಹ ದುರಂತ ಅಂತ್ಯ

Spread the love

ಪುತ್ತೂರು : ದಾಂಪತ್ಯ ಕಲಹ ದುರಂತ ಅಂತ್ಯ

ಪುತ್ತೂರು: ದಾಂಪತ್ಯ ಕಲಹ ದುರಂತ ಅಂತ್ಯ ಕಂಡ ದಾರುಣ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಇಂದು (ಮಾ.20) ಬೆಳಗ್ಗೆ ಸಂಭವಿಸಿದೆ. ಗಂಡ- ಹೆಂಡತಿಯ ನಡುವಿನ ಜಗಳದ ಮಧ್ಯೆ ಹೆಂಡತಿ ಕೊಲೆಯಾಗಿದ್ದು, ಬಳಿಕ ಗಂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

ಪತಿ ಮತ್ತು ಪತ್ನಿ ನಡುವೆ ನಡೆದ ತೀವ್ರ ವಾಗ್ವಾದವು ಹಿಂಸಾತ್ಮಕ ತಿರುವು ಪಡೆದು, ಪತಿ ಪತ್ನಿಯನ್ನು ಕೊಲೆ ಮಾಡಿರುವುದಾಗಿ ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನೆಯ ಬಳಿಕ ಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ಸಿಕ್ಕ ತಕ್ಷಣ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯ ನಿಖರ ಕಾರಣ ಹಾಗೂ ಹಿನ್ನೆಲೆ ಕುರಿತು ಇನ್ನಷ್ಟೇ ಮಾಹಿತಿ ಬರಬೇಕಿದೆ. ತನಿಖೆ ಮುಂದುವರಿದಿದೆ.


Spread the love
Subscribe
Notify of

0 Comments
Inline Feedbacks
View all comments