ಪುತ್ತೂರು: ಮನೆಯ ಕಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು

Spread the love

ಪುತ್ತೂರು: ಮನೆಯ ಕಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು

ಮಂಗಳೂರು: ಮಂಗಳವಾರ ನಗರದಲ್ಲಿ ಸುರಿದ ಭಾರಿ ಮಳೆಗೆ ಪುತ್ತೂರು ತಾಲೂಕಿನ ಗೋಳಿತೊಟ್ಟು ಬಾಲಮಂದಿರ ಬಳಿ ಮನೆಯೊಂದರ ಕಂಪೌಂಡ್ ಕುಸಿದು ಮಹಿಳೆ ಮೃತಪಟ್ಟ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ಪುತ್ತೂರು ತಾಲೂಕಿನ ಗೋಳಿತೊಟ್ಟು ನಿವಾಸಿ ಚಂದ್ರಶೇಖರ ಎಂಬವರ ಪತ್ನಿ ಶೋಭಾ(49) ಎಂದು ಗುರುತಿಸಲಾಗಿದೆ.

ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಭಾರಿ ಮಳೆಸುರಿಯುತ್ತಿದ್ದು, ಭಾರೀ ಮಳೆಯಿಂದಾಗಿ ಕಂಪೌಂಡ್ ಗೋಡೆ ಶಿಥಿಲಗೊಂಡಿದ್ದು ಶೋಭಾ ಅವರ ಮೇಲೆ ಮಗುಚಿಬಿದ್ದಿದೆ. ಇದರಿಂದ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.

ಪುತ್ತೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.


Spread the love