Home Mangalorean News Kannada News ಪುತ್ತೂರು: ರಸ್ತೆ ಬದಿಯ ಚರಂಡಿ ದುರಸ್ತಿಗೊಳಿಸಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ರಸ್ತೆ ಬದಿಯ ಚರಂಡಿ ದುರಸ್ತಿಗೊಳಿಸಿದ ಶಾಸಕ ಅಶೋಕ್ ಕುಮಾರ್ ರೈ

Spread the love

ಪುತ್ತೂರು: ರಸ್ತೆ ಬದಿಯ ಚರಂಡಿ ದುರಸ್ತಿಗೊಳಿಸಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಚರಂಡಿ ಸಮಸ್ಯೆಯಿಂದಾಗಿ ಮಳೆ ನೀರು ಸಮರ್ಪಕವಾಗಿ ಹರಿಯದೆ ರಸ್ತೆಗೆ ಬಂದು ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ತಾವೇ ಪಂಚೆ ಎತ್ತಿಕಟ್ಟಿ ಹಾರೆ ಹಿಡಿದು ಚರಂಡಿ ದುರಸ್ತಿಗೊಳಿಸಿದ ಘಟನೆ ರವಿವಾರ ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿ ನಡೆಯಿತು.

ಶಾಸಕರು ಚರಂಡಿ ದುರಸ್ತಿಗೊಳಿಸುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಪ್ರಸಂಶೆ ವ್ಯಕ್ತವಾಗಿದೆ.

ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿನ ಕೋಡಿಂಬಾಡಿ ಎಂಬಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿಯಲ್ಲಿ ರಸ್ತೆ ಬದಿಯ ಚರಂಡಿಯಲ್ಲಿ ಹೂಳು ತುಂಬಿದ್ದ ಕಾರಣ ಮಳೆ ನೀರೆಲ್ಲಾ ರಸ್ತೆಯಲ್ಲಿ ಹರಿಯುತ್ತಿತ್ತು. ಇದರಿಂದಾಗಿ ಈ ಭಾಗದಲ್ಲಿ ಸಂಚರಿಸುವ ವಾಹನಗಳಿಗೆ ಹಾಗೂ ಪಾದಚಾರಿಗಳಿಗೆ ಕೆಸರು ನೀರಿನ ಅಭಿಷೇಕ ನಡೆಯುತ್ತಿತ್ತು. ಈ ರಸ್ತೆಯಲ್ಲಿ ಸಾಗುತ್ತಿದ್ದ ಶಾಸಕ ಅಶೋಕ್ ಕುಮಾರ್ ರೈ ಅವರು ಇದನ್ನು ಗಮನಿಸಿ ತಕ್ಷಣವೇ ಕಾರಿನಿಂದ ಇಳಿದು ಪಕ್ಕದ ಮನೆಯೊಂದರಿಂದ ಹಾರೆಯನ್ನು ತರಿಸಿ ರಸ್ತೆ ಬದಿಯಲ್ಲಿನ ಚರಂಡಿಯಲ್ಲಿ ತುಂಬಿದ್ದ ಹೂಳನ್ನು ತೆರವುಗೊಳಿಸಿ, ಸುಗಮ ನೀರು ಹರಿಯುವಂತೆ ಮಾಡಿದರು.


Spread the love

Exit mobile version