Spread the love
ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಮೃತ್ಯು
ಪುತ್ತೂರು: ತಾಲೂಕಿನಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿನ ಅಘಾತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ.
ಆನಡ್ಕ ನಿವಾಸಿ ವಾಮನ (40) ಸಾವನ್ನಪ್ಪಿದ ವ್ಯಕ್ತಿ.
ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30 ರ ವೇಳೆಗೆ ತನ್ನ ಕೆಲಸ ಮುಗಿಸಿ ಮನೆಗೆ ಬಂದು ಮನೆಯ ಮುಂಭಾಗದಲ್ಲಿ ಕುಳಿತುಕೊಂಡಿದ್ದ ವೇಳೆಯಲ್ಲಿ ಬಡಿದ ಸಿಡಿಲು ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
Spread the love