ಪುಷ್ಪಾನಂದ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ

Spread the love

ಪುಷ್ಪಾನಂದ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ

ಉಡುಪಿ: ಪುಷ್ಪಾನಂದ ಫೌಂಡೇಶನ್ ವತಿಯಿಂದ 2025ನೇ ಸಾಲಿನ ಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ 85% ಮೇಲ್ಪಟ್ಟು ಅಂಕಗಳಿಸಿದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿರುವುದಾಗಿ ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದ ಉಡುಪಿ ನಗರಸಭೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಪ್ರತಿಗಳು “ಸ್ವರಾಷ್ಟ್ರ ಸೇವಾ” ಶಾಸಕರ ಕಚೇರಿ ಉಡುಪಿ ಹಾಗೂ ಬ್ರಹ್ಮಾವರ ತಾಲೂಕು ಕಚೇರಿಯಲ್ಲಿರುವ ಶಾಸಕರ ಕಚೇರಿಯಲ್ಲಿ ಲಭ್ಯವಿದೆ.

05-10- 2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 9743495256, 9901190402, 9611817725, 9019566366 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments