ಪೊಲೀಸ್ ಅಧಿಕಾರಿಯ ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Spread the love

ಪೊಲೀಸ್ ಅಧಿಕಾರಿಯ ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು : ಉರ್ವ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ವರದಿಯಾಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮತ್ತು ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ನಿಯಾಝ್ ಯಾನೆ ನಿಯಾ ಎಂಬಾತನನ್ನು ಗುರುವಾರ ಬೆಂಗಳೂರಿನ ಹುಳಿಮಾವು ಅರಕೆರೆ ಎಂಬಲ್ಲಿ ಬಂಧಿಸಲಾಗಿದೆ.

2017ರ ಎಪ್ರಿಲ್‌ನಲ್ಲಿ ಮುಂಜಾವ 3ಕ್ಕೆ ನಗರದ ಲೇಡಿಹಿಲ್ ಸರ್ಕಲ್ ಬಳಿ ಎಎಸ್ಸೈ ಬೈಕ್‌ನಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ತಡೆದು ರಾಡ್‌ನಿಂದ ಹಲ್ಲೆ ನಡೆಸಿದ್ದರು. ಗಂಭೀರ ಗಾಯಗೊಂಡಿದ್ದ ಎಎಸ್ಸೈ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ತನಿಖೆ ನಡೆಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ ಜಾಮೀನಿನ ಮೇಲೆ ಹೊರ ಬಂದಿದ್ದ ಆರೋಪಿ ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿಯ ವಿರುದ್ಧ ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ 13 ಪ್ರಕರಣಗಳು ದಾಖಲಾಗಿದ್ದು, ಇತರ ನ್ಯಾಯಾಲಯಗಳಲ್ಲಿ ಈತನ ವಿರುದ್ಧ ವಾರೆಂಟ್ ಹೊರಡಿಸಲಾಗಿತ್ತು.


Spread the love
Subscribe
Notify of

0 Comments
Inline Feedbacks
View all comments