ಪೋರ್ಚುಗಲ್‌ನಲ್ಲಿ ಕರ್ನಾಟಕ ಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಭೇಟಿಯಾದ ಭಾರತದ ರಾಯಭಾರಿ ಕಚೇರಿಯ ಮುಖ್ಯಸ್ಥ ಪುನೀತ್ ಕುಂದನ್
ಲಿಸ್ಬನ್ (ಪೋರ್ಚುಗಲ್): ಅಂತರಾಷ್ಟ್ರೀಯ ಸ್ಪೀಕರ್‌ಗಳ ಸಮಾವೇಶದಲ್ಲಿ ಭಾಗವಹಿಸಲು ಪೋರ್ಚುಗಲ್‌ಗೆ ಭೇಟಿ ನೀಡಿರುವ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಅಲ್ಲಿನ ಭಾರತದ ರಾಯಭಾರಿ ಕಚೇರಿಯ ಮುಖ್ಯಸ್ಥ ಪುನೀತ್ ಕುಂದನ್ ಅವರು ಭೇಟಿ ಮಾಡಿ ಸ್ನೇಹಪೂರ್ಣ ಮಾತುಕತೆ ನಡೆಸಿದರು.
ಭಾರತ ಮತ್ತು ಪೋರ್ಚುಗಲ್ ನಡುವಿನ ಸಾಂಸ್ಕೃತಿಕ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಸಹಕಾರದ ಸಾಧ್ಯತೆಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಯಿತು. ಪೋರ್ಚುಗಲ್ ದೇಶವು ಅಟ್ಲಾಂಟಿಕ್ ಮಹಾಸಾಗರವನ್ನು ಆವರಿಸಿಕೊಂಡಿದ್ದು, ಪ್ರವಾಸೋದ್ಯಮವು ಅಲ್ಲಿನ ಪ್ರಮುಖ ಆಕರ್ಷಣೆ ಎಂಬುದನ್ನು ಸಭೆಯಲ್ಲಿ ಉಲ್ಲೇಖಿಸಲಾಯಿತು.
ಈ ಹಿನ್ನೆಲೆಯಲ್ಲಿ, ಕರ್ನಾಟಕದ ಕರಾವಳಿ ಪ್ರದೇಶದಲ್ಲಿಯೂ ಪ್ರವಾಸೋದ್ಯಮವನ್ನು ಹೆಚ್ಚು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಯುಕ್ತ ಯೋಜನೆಗಳು ಮತ್ತು ಅನುಭವ ವಿನಿಮಯ ಕುರಿತ ವಿಚಾರ ವಿನಿಮಯ ನಡೆಯಿತು ಎಂದು ತಿಳಿದುಬಂದಿದೆ.
ಸಭಾಧ್ಯಕ್ಷ ಖಾದರ್ ಅವರು, ಕರಾವಳಿ ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಸಂಸ್ಕೃತಿ ಪ್ರವಾಸೋದ್ಯಮದ ಬೆಳವಣಿಗೆಗೆ ಮಹತ್ವದ ಪಾತ್ರ ವಹಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.