Home Mangalorean News Kannada News ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

Spread the love

ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಕೊಲೆಯಾದ ರೌಡಿಶೀಟರ್ ಸುಹಾಸ್ ಶೆಟ್ಟಿಗೆ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ಮೇ 12ರಂದು ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಸಮಾಜದ ಸ್ವಾಸ್ಥ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಭಾಷಣ ಮಾಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಭಟ್ ವಿರುದ್ಧ ಅಕ್ರ ನಂಬ್ರ: 60/2025, ಕಲಂ: 353(2) BNSರಂತೆ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


Spread the love

Exit mobile version