ಪ್ರಜಾಸೌಧಕ್ಕೆ ಪ್ರತಿಭಟನಾ ಮೆರವಣಿಗೆ ಹೊರಟ ಸಿಪಿಎಂ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ

Spread the love

ಪ್ರಜಾಸೌಧಕ್ಕೆ ಪ್ರತಿಭಟನಾ ಮೆರವಣಿಗೆ ಹೊರಟ ಸಿಪಿಎಂ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಂಗಳೂರು: ಕರಾವಳಿ ಕರ್ನಾಟಕದ ಅಭಿವೃದ್ದಿ ನೀತಿಯನ್ನು ಜನಪರವಾಗಿ ರೂಪಿಸಲು ಆಗ್ರಹಿಸಿ, ಕಾರ್ಪೊರೇಟ್ ಪರವಾದ ಪಿಪಿಪಿ ನೀತಿ ಬೇಡ ಶಿಕ್ಷಣ, ಉದ್ಯೋಗ, ಆರೋಗ್ಯ, ವಸತಿ ಒದಗಿಸುವ ನೀತಿ ಬೇಕು ಎಂದು ಒತ್ತಾಯಿಸಿ ದ.ಕ. ಮತ್ತು ಉಡುಪಿ ಸಿಪಿಎಂ ಸಮಿತಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಗೆ ಆಗ್ರಹ ಪತ್ರ ಸಲ್ಲಿಸಲು ಹೊರಟ ಮೆರವಣಿಗೆಯನ್ನು ಶುಕ್ರವಾರ ಬೆಳಗ್ಗೆ ಬೆಂದೂರ್ ವೆಲ್ ವೃತ್ತದ ಬಳಿ ಪೊಲೀಸರು ತಡೆದು, ನಾಯಕರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಬೆಳಗ್ಗೆ ಮೆರವಣಿಗೆಯಲ್ಲಿ ಸಂಪುಟ ಸಭೆಗೆ ತೆರಳಿ ಆಗ್ರಹ ಪತ್ರ ಸಲ್ಲಿಸಲು ಸಿಪಿಎಂ ತಯಾರಿ ನಡೆಸಿತ್ತು. ಮೆರವಣಿಗೆ ಮೊದಲು ಧರಣಿ ನಡೆಸಿದ ಸಿಪಿಎಂ ಕಾರ್ಯಕರ್ತರು ಸರಕಾರದ ವಿರುದ್ಧ ಘೋಷಣೆ ಕೂಗಿದರು. 21ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಸಿಪಿಎಂ ರಾಜ್ಯ ಕಾರ್ಯದರ್ಶಿ ಡಾ.ಕೆ.ಪ್ರಕಾಶ್, ದ.ಕ. ಜಿಲ್ಲಾ ಕಾರ್ಯ ದರ್ಶಿ ಮುನೀರ್ ಕಾಟಿಪಳ್ಳ , ಉಡುಪಿ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿದರು.

ಬಳಿಕ ಮೆರವಣಿಗೆ ಹೊರಡುತ್ತಿದ್ದಂತೆ ತಡೆದ ಪೊಲೀಸರು ಸಿಪಿಎಂ ನಾಯಕರನ್ನು, ಕಾರ್ಯಕರ್ತರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು.

ವಾಹನದಲ್ಲಿ ಸರಕಾರದ ವಿರುದ್ಧ ಘೋಷಣೆ ಕೂಗಿದ ಸಿಪಿಎಂ ನಾಯಕರು ಬೇಡಿಕೆ ಈಡೇರಿಕೆ ಆಗ್ರಹಿಸಿದರು.


Spread the love
Subscribe
Notify of

0 Comments