Home Mangalorean News Kannada News ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ – ಜಿಲ್ಲಾಧಿಕಾರಿ ಜಿ.ಜಗದೀಶ್

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ – ಜಿಲ್ಲಾಧಿಕಾರಿ ಜಿ.ಜಗದೀಶ್

Spread the love

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ – ಜಿಲ್ಲಾಧಿಕಾರಿ ಜಿ.ಜಗದೀಶ್

ಸಾರ್ವಜನಿಕ ವಿತರಣಾ ಪದ್ದತಿಯಡಿಯಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಏಪ್ರಿಲ್ ಮತ್ತು ಮೇ-2020ರ ಮಾಹೆಗೆ ಬಿಡುಗಡೆಯಾಗಿರುವ ಆಹಾರಧಾನ್ಯವನ್ನು ಮೇ-2020ರ ಮಾಹೆಯ ಪಡಿತರ ಚೀಟಿದಾರರಿಗೆ ಈ ಕೆಳಗಿನಂತೆ ವಿತರಿಸಲಾಗುವುದು.

  1. ಅಂತ್ಯೋದಯ ಕಾರ್ಡಿನ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಮತ್ತು ಕಾರ್ಡಿಗೆ 1 ಕೆಜಿ ತೊಗರಿಬೇಳೆ ಉಚಿತವಾಗಿ ವಿತರಿಸಲಾಗುವುದು.
  2. ಪಿಹೆಚ್.ಹೆಚ್ (ಬಿಪಿಎಲ್) ಕಾರ್ಡಿನ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಮತ್ತು ಕಾರ್ಡಿಗೆ 1 ಕೆಜಿ ತೊಗರಿಬೇಳೆ ಮತ್ತು ಏಪ್ರಿಲ್ -2020ರ ಮಾಹೆಗೆ ವಿತರಿಸಬೇಕಾಗಿದ್ದ ಗೋಧಿಯನ್ನು ಮೇ-2020ರ ಮಾಹೆಯಲ್ಲಿ ಪ್ರತಿ ಕಾರ್ಡಿಗೆ 4 ಕೆಜಿ ಗೋಧಿಯನ್ನು ಉಚಿತವಾಗಿ ವಿತರಿಸಲಾಗುವುದು.
  3. ಆಹಾರಧಾನ್ಯ ಪಡೆಯಲು ನೋಂದಾಯಿಸದೆ ಇರುವ ಎನ್.ಪಿ.ಹೆಚ್.ಹೆಚ್(ಎಪಿಎಲ್) ಏಕ ಸದಸ್ಯ ಪಡಿತರ ಚೀಟಿ ಕಾರ್ಡಿಗೆ 5 ಕೆಜಿ ಅಕ್ಕಿ ಮತ್ತು ಎರಡು ಮತ್ತು ಹೆಚ್ಚಿನ ಸದಸ್ಯರಿರುವ ಕಾರ್ಡುಗಳಿಗೆ 10 ಕೆಜಿ ಅಕ್ಕಿ ಪ್ರತಿ ಕೆಜಿಗೆ. ರೂ 15-/- ರಂತೆ ವಿತರಿಸಲಾಗುವುದು.
  4. ಹೊಸದಾಗಿ ಅರ್ಜಿ ಸಲ್ಲಿಸಿರುವ ಪಿಹೆಚ್.ಹೆಚ್ (ಬಿಪಿಎಲ್) ಫಲಾನುಭವಿಗಳಿಗೆ ಪ್ರತಿ ಅರ್ಜಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು.
  5. ಅಂತರ ರಾಜ್ಯ/ಅಂತರ-ಜಿಲ್ಲೆ ಪಡಿತರ ಚೀಟಿದಾರರು ಪೋರ್ಟಿಬಿಲಿಟಿಯಲ್ಲಿ ಆಹಾರಧಾನ್ಯ ಪಡೆಯಲು ಅವಕಾಶವಿದ್ದು ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಬಹುದಾಗಿದೆ.
  6. ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಪಡಿತರ ಚೀಟಿದಾರರ ಆಧಾರ್ ದೃಢೀಕೃತ ಬೆರಳಚ್ಚು (ಆಧಾರ್ ಬಯೋಮೆಟ್ರಿಕ್)/ಆಧಾರ್ ಓಟಿಪಿ/ಮೊಬೈಲ್ ಓಟಿಪಿ ದೃಢೀಕರಣದ ಮೂಲಕವೇ ಪಡಿತರ ವಿತರಿಸಲಾಗುವುದು.
  7. ತೊಗರಿಬೇಳೆ ಜಿಲ್ಲೆಗೆ ಪ್ರಸ್ತುತ ಸರಬರಾಜು ಆಗುತ್ತಿರುವುದರಿಂದ ಪಡಿತರ ಚೀಟಿದಾರರಿಗೆ ಎಲ್ಲಾ ಆಹಾರಧಾನ್ಯವನ್ನು ಏಕಕಾಲದಲ್ಲಿ ವಿತರಿಸಬೇಕಾಗಿರುವುದರಿಂದ ತೊಗರಿಬೇಳೆ ಪೂರ್ಣ ಪ್ರಮಾಣದಲ್ಲಿ ಸರಬರಾಜು ಆದ ಕೂಡಲೇ ಮೇ ಮೊದಲ ವಾರದ ಕೂನೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಏಕಕಾಲದಲ್ಲಿ ಆಹಾರಧಾನ್ಯ ವಿತರಿಸಲಾಗುವುದು.
    ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರು ಪಡಿತರ ಪಡೆಯುವಾಗ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಗಳನ್ನು ಹಾಕಿಕೊಂಡು ಪಡಿತರ ಪಡೆಯುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

Spread the love

Exit mobile version