ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯುವುದಕ್ಕೆ ನಿರ್ಬಂಧ

Spread the love

ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯುವುದಕ್ಕೆ ನಿರ್ಬಂಧ

ಮ0ಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ನ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‍ಗಳಲ್ಲಿ ಸಾಮಪ್ರದಾಯಿಕ ಮೀನುಗಾರರನ್ನು ಹೊರತುಪಡಿಸಿ ಇತರ ಯಾವುದೇ ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಈ ನಿರ್ಬಂಧಿತ ಆದೇಶವು ಜಿಲ್ಲೆಯ ಈ ಸಾಂಪ್ರದಾಯಿಕ ಮೀನುಗಾರರಿಗೆ ಅನ್ವಯಿಸುವುದಿಲ್ಲ, ಈ ಆದೇಶವನ್ನು ಯಾರೂ ಉಲ್ಲಂಘಿಸುವಂತಿಲ್ಲ, ಮೇಲಿನ ಕಡಲ ಕಿನಾರೆಗಳಿಗೆ ಆಗಮಿಸುವ ಸಾರ್ವಜನಿಕರು/ಪ್ರವಾಸಿಗರು ಕಡಲ ಕಿನಾರೆಗಳಲ್ಲಿ ನಿಯೋಜಿಸಿರುವ ಗೃಹ ರಕ್ಷಕ, ಪೊಲೀಸ್ ಸಿಬ್ಬಂದಿ ಹಾಗೂ ಪ್ರವಾಸಿ ಮಿತ್ರರು ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಕಡಲ ಕಿನಾರೆಗಳಲ್ಲಿ ಅಪಾಯಕಾರಿ ಸ್ಥಳ ಎಂದು ಗುರುತಿಸಿದ ಪ್ರದೇಶವನ್ನು ಮೀರಿ ಸಾರ್ವಜನಿಕರು/ಪ್ರವಾಸಿಗರು ಪ್ರವೇಶಿಸುವಂತಿಲ್ಲ. ಈ ನಿರ್ಬಂಧಿತ ಆದೇಶವನ್ನು ಉಲ್ಲಂಘಿಸಿ ಅತಿಕ್ರಮಿಸಿ ಪ್ರವೇಶಿಸಿದಲ್ಲಿ ಅಂತಹವರನ್ನು ಸಂಬಂಧಿಸಿದ ಪೊಲೀಸ್ ಠಾಣೆಗೆ ಒಪ್ಪಿಸಲು ಕಡಲ ಕಿನಾರೆಗಳಲ್ಲಿ ನಿಯೋಜಿಸಿದ ಪೊಲೀಸ್ ಸಿಬ್ಬಂದಿ/ ಗೃಹರಕ್ಷಕರು/ ಪ್ರವಾಸಿ ಮಿತ್ರರಿಗೆ ಅಧಿಕಾರವನ್ನು ನೀಡಲಾಗಿದೆ.

ಈ ನಿರ್ಬಂಧಿತ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 188 ರಂತೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಈ ಆದೇಶವು ಜೂನ್ 30 ರಿಂದ 2017 ಆಗಸ್ಟ್ 30 ರವರೆಗೂ ಜ್ಯಾರಿಯಲ್ಲಿರುತ್ತದೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.


Spread the love