ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಪತ್ತೆ; ಕಣ್ಣೂರು ಏರ್‌ಪೋರ್ಟ್‌ನಲ್ಲಿ ಎನ್‌ಐಎ ವಶಕ್ಕೆ!

Spread the love

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಪತ್ತೆ; ಕಣ್ಣೂರು ಏರ್‌ಪೋರ್ಟ್‌ನಲ್ಲಿ ಎನ್‌ಐಎ ವಶಕ್ಕೆ!

ಮಂಗಳೂರು: 2022ರಲ್ಲಿ ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ರಹಮಾನ್‌ನನ್ನು ಎನ್ಐಎ ಬಂಧಿಸಿದೆ. ಈತ ಕತಾರ್‌ನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಪಿಎಫ್‌ಐ ನಾಯಕರ ನಿರ್ದೇಶನದಂತೆ ದಾಳಿಕೋರರಿಗೆ ಆಶ್ರಯ ನೀಡಿದ್ದ ಎಂದು ತಿಳಿದುಬಂದಿದೆ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ ಎನ್ಐಎ 4 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.

2022ರ ಜುಲೈ 26ರಂದು ನಡೆದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಂಧಿಸಿದೆ.

ಅಬ್ದುಲ್ ರಹಮಾನ್ ಎಂಬಾತ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಕತಾರ್‌ನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಾಗ ಎನ್ಐಎ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ. ಪಿಎಫ್‌ಐ ನಾಯಕರ ನಿರ್ದೇಶನದಂತೆ ಅಬ್ದುಲ್ ರೆಹಮಾನ್ ದಾಳಿಕೋರರಿಗೆ ಆಶ್ರಯ ನೀಡಿದ್ದ ಎಂದು ತಿಳಿದುಬಂದಿದೆ.

2022ರ ಜುಲೈ 26ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ತಮ್ಮ ಅಂಗಡಿ ಬಳಿ ಪ್ರವೀಣ್ ನೆಟ್ಟಾರು ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಆನಂತರ ಅಬ್ದುಲ್ ರಹಮಾನ್‌ನನ್ನು ಕತಾರ್ ದೇಶಕ್ಕೆ ಪರಾರಿಯಾಗಿದ್ದ. ಆತನ ಬಗ್ಗೆ ಮಾಹಿತಿ ನೀಡಿದವರಿಗೆ ಎನ್ಐಎ 4 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿತ್ತು.

28 ಜನರ ವಿರುದ್ಧ ಚಾರ್ಜ್ ಶೀಟ್
ಜೊತೆಗೆ, ಅಬ್ದುಲ್ ರೆಹಮಾನ್ ಸೇರಿದಂತೆ ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಮೂಲಕ ಪ್ರಕರಣದಲ್ಲಿ ಒಟ್ಟು 28 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.

ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿರುವಂತೆ, ಹತ್ಯೆ ಬಳಿಕ ಪರಾರಿಯಾಗಲು ಪ್ರಮುಖ ಆರೋಪಿ ಮುಸ್ತಾಫ ಪೈಚಾರ್ಗೆ ಬಂಧಿತರಾದ ಅತೀಕ್ ಹಾಗೂ ಸದ್ಯ ಮೃತನಾಗಿರುವ ಕಲಾಂದರ್ ಚೆನ್ನೈನಲ್ಲಿ 2022ರಿಂದ 2023ರ ವರೆಗೆ ಆಶ್ರಯ ಪಡೆದುಕೊಂಡಿದ್ದರು. ಅಲ್ಲದೆ, ನಾಪತ್ತೆಯಾಗಿರುವ ಅಬ್ದುಲ್ ರೆಹಮಾನ್ ವಿದೇಶಕ್ಕೆ ಪರಾರಿಯಾಗಲು ಹಾಗೂ ರಿಯಾಜ್ ಎಂಬಾತ ಪೈಚಾರ್ಗೆ ಆಶ್ರಯ ಒದಗಿಸುವ ಬಗ್ಗೆ ಅತೀಕ್ ಹಾಗೂ ಕಲಾಂದರ್ಗೆ ಮಾರ್ಗದರ್ಶನ ನೀಡಿದ್ದ ಎಂದು ಎನ್‌ಐಎ ಹೇಳಿತ್ತು. ಸದ್ಯ ತನಿಖೆ ಮುಂದುವರೆದಿದೆ.


Spread the love
Subscribe
Notify of

0 Comments
Inline Feedbacks
View all comments