Home Mangalorean News Kannada News ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣ: ಓರ್ವ ಆರೋಪಿಗೆ ಜಾಮೀನು ಮಂಜೂರು

ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣ: ಓರ್ವ ಆರೋಪಿಗೆ ಜಾಮೀನು ಮಂಜೂರು

Spread the love

ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣ: ಓರ್ವ ಆರೋಪಿಗೆ ಜಾಮೀನು ಮಂಜೂರು

ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಓರ್ವನಿಗೆ ಜಾಮೀನು ಮಂಜೂರಾಗಿದೆ. ರಿಯಾಜ್‌ ಎಚ್‌ ವೈ ಎಂಬ ವ್ಯಕ್ತಿಗೆ ಜಾಮೀನು ಮಂಜೂರಾಗಿದೆ.

ಜುಲೈ 26,2022 ರಂದು ತನ್ನ ಮನೆಗೆ ಹೊರಟಿದ್ದ ಪ್ರವೀಣ್‌ ನೆಟ್ಟಾರ್‌ ಮೇಲೆ ಆರೋಪಿಗಳು ಮಾರಕಾಸ್ತ್ರದಿಂದ ದಾಳಿ ಮಾಡಿ ಕೊ*ಲೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‌ಐಎ ಒಟ್ಟು 26 ಮಂದಿಯನ್ನು ವಶಕ್ಕೆ ಪಡೆದುಕೊಂಡಿತ್ತು. ಈ ಪ್ರಕರಣದ 26 ನೇ ಆರೋಪಿಯಾಗಿರುವ ಕೊಡಗು ಸೋಮವಾರಪೇಟೆ ಮೂಲದ ರಿಯಾಜ್‌ ಎಂಬಾತನಿಗೆ ಜಾಮೀನು ಮಂಜೂರಾಗಿರುವ ಕುರಿತು ವರದಿಯಾಗಿದೆ.


Spread the love

Exit mobile version