ಫೆಬ್ರವರಿ 1 – 2 ;ಮಲ್ಪೆ ಬೀಚ್ ಉತ್ಸವ

Spread the love

ಫೆಬ್ರವರಿ 1 – 2 ;ಮಲ್ಪೆ ಬೀಚ್ ಉತ್ಸವ

ಉಡುಪಿ : ಜಿಲ್ಲಾಡಳಿತ ಉಡುಪಿ, ಮಲ್ಪೆ ಅಭಿವೃದ್ಧಿ ಸಮಿತಿ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಿರ್ಮಿತಿ ಕೇಂದ್ರ, ಪಶುಪಾಲನಾ ಇಲಾಖೆ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಹಾಗೂ ಸ್ಥಳೀಯ ಭಜನಾ ಮಂದಿರಗಳ ಸಹಯೋಗದೊಂದಿಗೆ ಮಲ್ಪೆ ಬೀಚ್ ಉತ್ಸವ ಕಾರ್ಯಕ್ರಮವು ಫೆಬ್ರವರಿ 1 ಮತ್ತು 2 ರಂದು ಮಲ್ಪೆ ಬೀಚ್‍ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಫೆಬ್ರವರಿ 1 ರಂದು ಸಂಜೆ 5.30 ಕ್ಕೆ ಗೃಹ ಮತ್ತು ಸಹಕಾರ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.


Spread the love