ಫೆ.1: ಡಿವೈನ್ ಪಾರ್ಕ್ ವತಿಯಿಂದ ಸರ್ವ ಕ್ಷೇಮ ಆಸ್ಪತ್ರೆ ಮತ್ತು  ಸಂಶೋಧನಾ ಪ್ರತಿಷ್ಠಾನ ಉದ್ಘಾಟನೆ

Spread the love

ಫೆ.1: ಡಿವೈನ್ ಪಾರ್ಕ್ ವತಿಯಿಂದ ಸರ್ವ ಕ್ಷೇಮ ಆಸ್ಪತ್ರೆ ಮತ್ತು  ಸಂಶೋಧನಾ ಪ್ರತಿಷ್ಠಾನ ಉದ್ಘಾಟನೆ

ಉಡುಪಿ: ಡಿವೈನ್ ಪಾರ್ಕ್ ಟ್ರಸ್ಟ್ ಸಾಲಿಗ್ರಾಮ ಇವರ ವತಿಯಿಂದ ಉಡುಪಿ ಜಿಲ್ಲೆಯ ಮೂಡುಗಿಳಿಯಾರಿನ ಯೋಗಬನದಲ್ಲಿ ಸರ್ವ ಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನದ ಉದ್ಘಾಟನೆ ಫೆಬ್ರವರಿ 1 ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿದೆ ಎಂದು ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಡಾ|ಎ ವಿವೇಕ ಉಡುಪ ಹೇಳಿದರು.

ಅವರು ಉಡುಪಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಡಿವೈನ್ ಪಾರ್ಕಿನ ಪಾವನ ಸಂಸ್ಥೆಯಾದ ಸರ್ವಕ್ಷೇಮ ಆಸ್ಮತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ ವೀರೆಂದ್ರ ಹೆಗ್ಗಡೆಯವರು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ|ಚಂದ್ರಶೇಖರ್ ಉಡುಪಿ (ಡಾಕ್ಟರ್ ಜೀ)ವಹಿಸಲಿದ್ದು, ಇದೇ ಸಂದರ್ಭದಲ್ಲಿ ಜಗತ್ತಿನ ಅತೀ ಎತ್ತರದ ಸ್ವಾಮೀ ವಿವೇಕಾನಂದರ ಪ್ರತಿಮೆಯನ್ನು ಸ್ವಾಮಿ ವಿವೇಕಾನಂದ ಯೋಗ ವಿಶ್ವವಿದ್ಯಾಲಯದ ಕುಲಪತಿಗಳಾದ ಹೆಚ್ ಆರ್ ನಾಗೇಂದ್ರ ಅವರು ಉದ್ಘಾಟಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಹಾಲಾಡಿ ಶ್ರಿನೀವಾಸ ಶೆಟ್ಟಿ ಭಾಗವಹಿಸಲಿದ್ದಾರೆ. ಮಧ್ಯಾಹ್ನದಿಂದ ರಾತ್ರಿ ವರೆಗೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರಾಚೀನ ದೇಗುಲದ ವಾಸ್ತು ವಿನ್ಯಾಸವನ್ನು ಹೊಂದಿದ ಜಗತ್ತಿನ ಪ್ರಥಮ ಯೋಗ ಆಸ್ಪತ್ರೆ ಆಯುಷ್ ವಿಭಾಗದಲ್ಲಿ ದೇಶದ ಪ್ರಥಮ ಪರಿಸರ ಸ್ನೇಹಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಇದಾಗಿದ್ದು ಕರಾವಳಿಯ ಪ್ರಾಚೀನ ಶೈಲಿಯಲ್ಲಿ ನಿರ್ಮಾಣಗೊಂಡಿದೆ. ಪ್ರಕೃತಿ ಯೋಗ, ಆಹಾರ, ಆಧ್ಯಾತ್ಮಿಕ, ಸಂಗೀತ ಹಸಿರು, ಹಾಸ್ಯ, ಮೌನ ಚಿಕಿತ್ಡೆಯ ಸಂಗಮ ಇಲ್ಲಿ ಇರಲಿದೆ ಎಂದರು.

ವ್ಯಕ್ತಿತ್ವ ನಿರ್ಮಾಣ ಹಾಗೂ ರಾಷ್ಟ್ರೋದ್ಧಾರದ ಬೇರೆ ಬೇರೆ ಯೋಜನೆಗಳಲ್ಲಿ ಆಧ್ಯಾತ್ಮ, ಆರೋಗ್ಯ, ಯೋಗದ ಮಹಿಮೆಯನ್ನು ತಿಳಿಸಿಕೊಂಡುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ವಿವೇಕಾನಂದರ ಪ್ರತಿಮೆ ಜಗತ್ತಿನಲ್ಲೇ ಅತೀ ಎತ್ತರದ ಪ್ರತಿಮೆಯಾಗಿದ್ದು 35 ಅಡಿ ಎತ್ತರವಿದ್ದು ಪ್ರತಿಮೆಗೆ ವಿಶೇಷವಾದ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಹಸಿರು ಹಾಸಿನ ನಡುವೆ ಪ್ರತಿಮೆಯನ್ನು ನಿರ್ಮಿಸಲಾಗಿದೆ ಎಂದರು.


Spread the love