ಫೆ. 18: ಚಿಕ್ಕಮಗಳೂರಿನಲ್ಲಿ 8 ಜೋಡಿಗಳ ಸಾಮೂಹಿಕ ವಿವಾಹ

Spread the love

ಫೆ. 18: ಚಿಕ್ಕಮಗಳೂರಿನಲ್ಲಿ 8 ಜೋಡಿಗಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಫೆ. 18ರಂದು ಚಿಕ್ಕಮಗಳೂರಿನಲ್ಲಿ 8 ಜೋಡಿಗಳ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದೆ. ಚಿಕ್ಕಮಗಳೂರು ಜಿಲ್ಲಾ ಬ್ಯಾರಿಗಳ ಒಕ್ಕೂಟ ಸಹಯೋಗದೊಂದಿಗೆ ಬೇಲೂರು ರಸ್ತೆಯ ಸೀತಾ ದಯಾನಂದ ಪೈ ಸಭಾಂಗಣದಲ್ಲಿ ಬೆಳಿಗ್ಗೆ ಗಂ. 10ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್. ರೋಶನ್ ಬೇಗ್ ಉದ್ಘಾಟಿಸಲಿದ್ದು, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು. ಟಿ. ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮೌಲಾನಾ ಔರಂಗಜೇಬ್ ಸಾಹಿಬ್ ಹಾಗೂ ಮೌಲಾನಾ ಹುಸೈನ್ ಸಅದಿ ಹೊಸ್ಮಾರ್ ನಿಖಾಹ್‍ನ ನೇತೃತ್ವವಹಿಸಲಿದ್ದಾರೆ.

ಮಾಜಿ ಸಭಾಪತಿ ಡಾ. ಬಿ.ಎಲ್. ಶಂಕರ್, ಶಾಸಕರಾದ ಸಿ.ಟಿ. ರವಿ, ಬಿ.ಬಿ. ನಿಂಗಯ್ಯ, ಜಿ.ಹೆಚ್. ಶ್ರೀನಿವಾಸ್, ವೈ.ಎಸ್.ವಿ. ದತ್ತಾ, ಡಿ.ಎನ್. ಜೀವರಾಜ್, ವಿಧಾನ ಪರಿಷತ್ ಸದಸ್ಯರಾದ ಡಾ. ಮೋಟಮ್ಮ, ಎಂ.ಕೆ. ಪ್ರಾಣೇಶ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಕೆ. ಮಹಮದ್, ಮಾಜಿ ಕೇಂದ್ರ ಸಚಿವೆ ಡಿ.ಕೆ. ತಾರಾದೇವಿ, ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಸ್.ಎಲ್. ಭೋಜೇಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್. ಮೂರ್ತಿ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಗಮದ ಅಧ್ಯಕ್ಷ ಎ.ಎನ್. ಮಹೇಶ್, ಅನಿವಾಸಿ ಭಾರತೀಯ ನಿಗಮದ ಅಧ್ಯಕ್ಷೆ ಆರತಿ ಕೃಷ್ಣ, ಅಂಜುಮನ್ ಎ ಇಸ್ಲಾಮಿಯಾ ಅಧ್ಯಕ್ಷ ನಝೀರ್ ಅಹಮದ್, ಕೆ.ಎಂ.ಜೆ.ಸಿ. ರಾಜ್ಯಾಧ್ಯಕ್ಷ ಯೂಸುಫ್ ಹಾಜಿ ಉಪ್ಪಳ್ಳಿ, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಶೇಖ್ ಫರೀದುದ್ದೀನ್, ಸೈಯದ್ ಮುನೀರ್ ಅಹ್ಮದ್ ಸಾಹಿಬ್, ಜಿಪಂ ಮಾಜಿ ಅಧ್ಯಕ್ಷ ಟಿ.ಡಿ. ರಾಜೇಗೌಡ, ಜಿಲ್ಲಾ ಬಿಎಸ್ಪಿ ಅಧ್ಯಕ್ಷ ಕೆ.ಟಿ. ರಾಧಾಕೃಷ್ಣ, ಜಿಲ್ಲಾ ಸಿಪಿಐ ಪ್ರಧಾನ ಕಾರ್ಯದರ್ಶಿ ಬಿ. ಅಮ್ಜದ್, ಅಲ್ ವಫಾ ಚಾರಿಟೆಬಲ್ ಟ್ರಸ್ಟ್‍ನ ಅಧ್ಯಕ್ಷ ಮುಹಮ್ಮದ್ ಹನೀಫ್ ಜಿ., ಚಿಕ್ಕಮಗಳೂರು ಜಿಲ್ಲಾ ಬ್ಯಾರಿಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ. ಇಬ್ರಾಹೀಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಲ್ ವಫಾ ಚಾರಿಟೆಬಲ್ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಉಮರ್ ಯು. ಹೆಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love