ಬಂಟ್ವಾಳದಲ್ಲಿ ಪ್ರತಿಭಟನೆ ಹಿನ್ನೆಲೆ: ಬಿಗಿ ಪೊಲೀಸ್ ಬಂದೋಬಸ್ತ್
ಬಂಟ್ವಾಳ: ಸೆಪ್ಟೆಂಬರ್ 28ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್ನಲ್ಲಿ ನಡೆಯಲಿರುವ ಪ್ರತಿಭಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಂಡಿದೆ.
ಪ್ರತಿಭಟನಾ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆ ಪರಿಶೀಲಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 27ರಂದು ಬಿ.ಸಿ.ರೋಡ್ ಪರಿಸರದಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.
ಪ್ರತಿಭಟನಾ ಕಾರ್ಯಕ್ರಮದ ಬಂದೋಬಸ್ತ್ ಕರ್ತವ್ಯಕ್ಕಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ 1, ಸಹಾಯಕ ಪೊಲೀಸ್ ಅಧೀಕ್ಷಕ 1, ಪೊಲೀಸ್ ನಿರೀಕ್ಷಕರು 8, ಪೊಲೀಸ್ ಉಪನಿರೀಕ್ಷಕರು 23, ಸಹಾಯಕ ಪೊಲೀಸ್ ಉಪನಿರೀಕ್ಷಕರು 34 ಹಾಗೂ ಪೊಲೀಸ್ ಸಿಬ್ಬಂದಿ 184 ಮಂದಿಯನ್ನು ನಿಯೋಜಿಸಲಾಗಿದೆ. ಇದರ ಜೊತೆಗೆ 5 ಹೋಮ್ಗಾರ್ಡ್ಗಳನ್ನೂ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ ಎಸ್ಎಎಫ್ನ 2 ತುಕಡಿ, ಡಿಎಆರ್ನ 3 ತುಕಡಿ ಹಾಗೂ ಕೆಎಸ್ಆರ್ಪಿ 4 ತುಕಡಿಗಳನ್ನು ನಿಯೋಜಿಸಲಾಗಿದೆ.
ಪ್ರತಿಭಟನೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ.













