ಬಂಟ್ವಾಳ ತಾಲೂಕಿನಾದ್ಯಂತ ನಿಷೇಧಾಜ್ಞೆ ಮುಂದುವರಿಕೆ

Spread the love

ಬಂಟ್ವಾಳ ತಾಲೂಕಿನಾದ್ಯಂತ ನಿಷೇಧಾಜ್ಞೆ ಮುಂದುವರಿಕೆ

ಮ0ಗಳೂರು : ಬಂಟ್ವಾಳ ತಾಲೂಕಿನಾದ್ಯಂತ ಜೂನ್ 2ರವರೆಗೆ ಸೆಕ್ಷನ್ 144 ರ ಅನ್ವಯ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಜೂನ್ 9 ರ ರಾತ್ರಿ 12 ಗಂಟೆಯವರೆಗೆ ವಿಸ್ತರಿಸಿ ಮಂಗಳೂರು ಉಪವಿಭಾಗ ದಂಡಾಧಿಕಾರಿ ಹಾಗೂ ಸಹಾಯಕ ಆಯುಕ್ತ ಎ.ಸಿ. ರೇಣುಕಾ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಬಂಟ್ವಾಳ ತಾಲೂಕಿನಾದ್ಯಂತ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ,ಬೀದಿ,ಓಣೆ,ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಛೇರಿ ಸುತ್ತಮುತ್ತ ಗುಂಪು ಸೇರಬಾರದು ಅಥವಾ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ.

ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಗದೆ, ಕೋಲು, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ. ಯಾವುದೇ ರೀತಿಯ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು. ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಒಟ್ಟುಗೂಡಿಸುವುದು, ಆಯುಧಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೀಷ್ಠೆಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಚಿತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೇರೇಪಿಸುವ ಕ್ರಮಗಳನ್ನು ನಿಷೇಧಿಸಿದೆ.


Spread the love