ಬಂಟ್ವಾಳ: ಪ್ರೇಯಸಿಗೆ ಚಾಕುವಿನಿಂದ ತಿವಿದು ಹಲ್ಲೆ ನಡೆಸಿ ಯುವಕ ಆತ್ಮಹತ್ಯೆ

Spread the love

ಬಂಟ್ವಾಳ: ಪ್ರೇಯಸಿಗೆ ಚಾಕುವಿನಿಂದ ತಿವಿದು ಹಲ್ಲೆ ನಡೆಸಿ ಯುವಕ ಆತ್ಮಹತ್ಯೆ

ಬಂಟ್ವಾಳ: ಯುವಕನೋರ್ವ ತನ್ನ ಪ್ರೇಯಸಿಗೆ ಚಾಕುವಿನಿಂದ ತಿವಿದು ಹಲ್ಲೆ ನಡೆಸಿ ಬಳಿಕ ಆತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ಕೊದ್ಮಾಣ್ ಎಂಬಲ್ಲಿ ಸೋಮವಾರ ನಡೆದಿದೆ.

ಫರಂಗಿಪೇಟೆ ನಿವಾಸಿ ಕುಮಾರಿ ದಿವ್ಯಾ ಯಾನೆ ದೀಕ್ಷಿತಾ (26) ಎಂಬಾಕೆ ಹಾಗೂ ಕೋಡ್ಮನ್ ಗ್ರಾಮ ನಿವಾಸಿ ಸುಧೀರ್ (30) ಎಂಬಾತನು ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಕಳೆದ ಕೆಲ ತಿಂಗಳುಗಳಿಂದ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿರುತ್ತದೆ. ಆದರೂ ಸಹ ಆರೋಪಿ ಸುಧೀರ್ ಫೋನ್ ಮಾಡುವುದು, ಹಿಂಬಾಲಿಸುವುದು, ಮಾಡುತ್ತಿದ್ದು, ಪ್ರಕರಣ ಮುಂದುವರಿದಂತೆ ಆರೋಪಿಯು ಸೋಮವಾರ ಬೆಳಿಗ್ಗೆ ಫರಂಗಿಪೇಟೆ, ಸುಜೀರ್ ಮಲ್ಲಿ ಎಂಬಲ್ಲಿಗೆ ಬಂದು ದಿವ್ಯಾಳೊಂದಿಗೆ ಮದುವೆಯಾಗುವಂತೆ ಒತ್ತಾಯಿಸಿದಾಗ ಮಾತಿಗೆ ಮಾತು ಬೆಳೆಸಿ ಗಲಾಟೆ ನಡೆದಿರುತ್ತದೆ.

ಈ ವೇಳೆ ಆರೋಪಿ ಸುಧೀರ್ ತಾನು ತಂದಿದ್ದ ಚಾಕುವಿನಿಂದ ದಿವ್ಯಾ ನನ್ನು ಸಾಯಿಸಲು ಚುಚ್ಚಿರುತ್ತಾನೆ. ಆಕೆ ತಪ್ಪಿಸಿಕೊಂಡು ಹೋಗುತ್ತಾ ಬಿದ್ದಾಗ, ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಆರೋಪಿಯು ಅಲ್ಲಿಂದ ತೆರಳಿ ದಿವ್ಯಾಳ ಬಾಡಿಗೆ ಮನೆಗೆ ಹೋಗಿ, ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಯನ್ನು ಮಾಡಿಕೊಂಡಿರುತ್ತಾನೆ

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದು, ತನಿಖೆ ನಡೆಸಿ ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.


Spread the love
Subscribe
Notify of

0 Comments
Inline Feedbacks
View all comments