Spread the love
ಬಂಟ್ವಾಳ : ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ನಾರಾಯಣ ಸೆರೆ
ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ನಾರಾಯಣ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ತನ್ನ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಂಟ್ವಾಳ ತಾಲೂಕಿನ ನಾರಾಯಣ ಎಂಬಾತ ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆಯೋರ್ವರು ನೀಡಿದ ದೂರಿಗೆ ಸಂಬಂದಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಸೋಮವಾರ ಅಕ್ರ 133/2025 ಕಲಂ: 7, 8 POCSO Act 2012 ಮತ್ತು 329(4), 75 BNS-2023 ನಂತೆ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
Spread the love