ಬಂಟ್ವಾಳ| ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು
ಬಂಟ್ವಾಳ : ಲಾರಿ ಮತ್ತು ದ್ವಿಚಕ್ರ ವಾಹನ ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಸೋಮವಾರ ಸಂಭವಿಸಿದೆ.
ಮೃತರನ್ನು ಶಂಭೂರು ಸಮೀಪದ ಕೊಪ್ಪಳ ನಿವಾಸಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಚಿದಾನಂದ (50) ಎಂದು ಗುರುತಿಸಲಾಗಿದೆ.
ಚಿದಾನಂದ ಅವರು ತಮ್ಮ ಸ್ಕೂಟರ್ ನಲ್ಲಿ ಬಿ.ಸಿ.ರೋಡ್ ಪೇಟೆಯಿಂದ ಬಂದು ಅಜ್ಜಿ ಬೆಟ್ಟು ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಿ.ಸಿ.ರೋಡಿನಿಂದ ಮಂಗಳೂರು ಕಡೆಗೆ ಹೋಗುವ ಲಾರಿ ಢಿಕ್ಕಿಯಾಗಿದೆ. ಈ ವೇಳೆ ಚಿದಾನಂದ ಅವರು ಲಾರಿಯ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.