ಬಂಧಿತ ಹಿಂದೂ ಮುಖಂಡ ಶರಣ್ ಪಂಪ್ವೆಲ್ ಗೆ ಜಾಮೀನು ಮಂಜೂರು
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ಸಂದರ್ಭ ಬಂದ್ಗೆ ಕರೆ ನೀಡಿದ್ದ ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ) ನಾಯಕ ಶರಣ್ ಪಂಪ್ವೆಲ್ ಅವರನ್ನು ಮಂಗಳವಾರ ರಾತ್ರಿ ಕದ್ರಿ ಪೊಲೀಸರು ಬಂಧಿಸಿ, ಆರೋಗ್ಯ ತಪಾಸಣೆ ನಡೆಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ ವೇಳೆ ಜಾಮೀನು ಮಂಜೂರು ಮಾಡಿದ್ದಾರೆ.
ಮಂಗಳವಾರ ರಾತ್ರಿ ನಗರದ ಬೋಂದೆಲ್ನಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ಶರಣ್ ಪಂಪ್ವೆಲ್ ಅವರನ್ನು ಹಾಜರುಪಡಿಸಿದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ವಿಚಾರಣೆಯನ್ನು ಬುಧವಾರಕ್ಕೆ (ಮೇ 28) ಮುಂದೂಡಿ ಜಾಮೀನು ಮಂಜೂರು ಮಾಡಿದರು.