ಬಜಪೆ ಚಿನ್ನಾಭರಣ–ನಗದು ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Spread the love

ಬಜಪೆ ಚಿನ್ನಾಭರಣ–ನಗದು ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯಲ್ಲಿ ನಡೆದ ಚಿನ್ನಾಭರಣ ಹಾಗೂ ನಗದು ಕಳ್ಳತನ ಪ್ರಕರಣವನ್ನು ಬಜಪೆ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು ₹27 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ದಿನಾಂಕ 23-09-2025ರಂದು ಕೆಂಜಾರು ಜೋಕಟ್ಟೆ ನಿವಾಸಿ ಮೊಹಮ್ಮದ್ ಷರೀಫ್ ಅವರು ಸಂಬಂಧಿಕರ ಮೆಹಂದಿ ಕಾರ್ಯಕ್ರಮಕ್ಕೆ ಕಳವಾರಿಗೆ ತೆರಳಿದ್ದ ವೇಳೆ, ರಾತ್ರಿ ಅವರ ಮನೆಯಲ್ಲಿ ಸುಮಾರು ₹23 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹1,25,000 ನಗದು ಕಳ್ಳತನವಾಗಿತ್ತು. ಈ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 176/2025, ಕಲಂ 331(3), 331(4), 305 BNS 2023ರಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಆರೋಪಿಯಾಗಿರುವ ಅಬ್ದುಲ್ ನಾಸರ್ @ ನಾಸಿರ್ @ ನಾಚಿ (31) ಎಂಬಾತನು ಕಳ್ಳತನದ ಬಳಿಕ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿರುವ ಮಾಹಿತಿ ಸಂಗ್ರಹಿಸಿ, ಲುಕ್ ಔಟ್ ಸರ್ಕ್ಯುಲರ್ (LOC) ಹೊರಡಿಸಿದ್ದರು. LOC ಮೂಲಕ ಆತನನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿದಾಗ, ಪಿರ್ಯಾದಿದಾರ ಮೊಹಮ್ಮದ್ ಷರೀಫ್ ಅವರ ಸಂಬಂಧಿಕರಾದ ಕಳವಾರು ನಿವಾಸಿ ಮಯ್ಯದ್ದಿ ಇಮ್ರಾನ್ ಜೊತೆಗೂಡಿ ಕಳ್ಳತನ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

ಆರೋಪಿಗಳಿಂದ ಸುಮಾರು ₹27 ಲಕ್ಷ ಮೌಲ್ಯದ 222 ಗ್ರಾಂ ತೂಕದ ಚಿನ್ನಾಭರಣ, ₹20,000 ನಗದು ಹಣ ಹಾಗೂ ಸುಮಾರು ₹50,000 ಮೌಲ್ಯದ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments