ಬಜ್ಪೆ ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Spread the love

ಬಜ್ಪೆ ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

ಬಜ್ಪೆ ವಿಮಾನ ನಿಲ್ದಾಣದಲ್ಲಿ 2010 ರ ಮೇ. ತಿಂಗಳಿನಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟ 12 ಮಂದಿಯ ಮೃತದೇಹಗಳನ್ನು ಸಮಾಧಿ ಮಾಡಿದ ಜಾಗದಲ್ಲಿ ವಿಮಾನ ಅಪಘಾತವಾದಲ್ಲಿ ಮಡಿದ 158 ಜನರ ನೆನಪಿಗಾಗಿ ಜಿಲ್ಲಾಡಳಿತದ ವತಿಯಿಂದ ಇಂದು ಕೂಳೂರು ಸೇತುವೆಯಿಂದ ತಣ್ಣೀರುಬಾವಿ ರಸ್ತೆಗೆ ತಿರುಗುವಲ್ಲಿ ನಿರ್ಮಿಸಲಾಗಿರುವ ಪಾರ್ಕ್‍ನಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸ್ಮಾರಕಕ್ಕೆ ಪುಷ್ಪಾರ್ಚನೆ ಗೈದು ಗೌರವ ಸಲ್ಲಿಸಿ ಘಟನೆಯ ಬಗ್ಗೆ ನೆನೆದು ಸಂತಾಪ ಸೂಚಿಸಿದರು. ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ, ಪುಷ್ಪಾರ್ಚನೆ ಗೈದು ಶದ್ಧಾಂಜಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಮೃತರ ಕುಟುಂಬಸ್ಥರು ಪುಪ್ಪಾರ್ಚನೆ ಅರ್ಪಸಿ ಶ್ರದ್ಧಾಂಜಲಿ ಸಲ್ಲಿಸಿದರು.

ನವ ಮಂಗಳೂರು ಬಂದರು ಪ್ರಾಧಿಕಾರದ ಅಧೀಕ್ಷಕ ಇಂಜಿನಿಯರ್ ಶೇಖರ್ ಲಗ್‍ವಂಕರ್, ಮಂಗಳೂರು ತಹಶಿಲ್ದಾರ್ ಪ್ರಶಾಂತ್ ವಿ. ಪಾಟೀಲ್, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಮೃತರ ಸಂಬಧಿಕರು ಬಾಗವಹಿಸಿದ್ದರು.


Spread the love

Leave a Reply