ಬನ್ನಂಜೆ ವೃತ್ತ ತೆರವು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಮಾಡಿದ ಅವಮಾನ: ಬಿಲ್ಲವ ಯುವ ವೇದಿಕೆ ಖಂಡನೆ

Spread the love

ಬನ್ನಂಜೆ ವೃತ್ತ ತೆರವು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಮಾಡಿದ ಅವಮಾನ: ಬಿಲ್ಲವ ಯುವ ವೇದಿಕೆ ಖಂಡನೆ

ಉಡುಪಿ: ಉಡುಪಿ ನಗರಸಭೆಯಿಂದ ಅಧಿಕೃತವಾಗಿ ಸ್ಥಾಪನೆಗೊಂಡಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಬನ್ನಂಜೆ ವೃತ್ತದಿಂದ ಕಿತ್ತು ಹಾಕಿ, ಉಡುಪಿ ನಗರ ಸಂಚಾರಿ ಠಾಣೆಯ ಪಾಲುಬಿದ್ದ ಜಾಗದ ಪೊದೆಗಳ ಮಧ್ಯೆ ಬಿಸಾಡಲಾಗಿದೆ. ಶ್ರೀ ನಾರಾಯಣ ಗುರುಗಳ ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮಫಲಕದ ವೃತ್ತವನ್ನು ರಚಿಸಲಾಗಿದೆ. ಇದು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ತೋರಿದ ದೊಡ್ಡ ಅಗೌರವ, ಇದನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯು ತೀವ್ರವಾಗಿ ಖಂಡಿಸುತ್ತದೆ. ಜಿಲ್ಲಾಡಳಿತ ತಕ್ಷಣ ಎಚ್ಚೆತ್ತು ಸ್ಪಷ್ಟನೆಯನ್ನು ಕೊಡಬೇಕು. ಇಲ್ಲದಿದ್ದಲ್ಲಿ ಇಡೀ ಸಮಾಜವನ್ನು ಒಗ್ಗೂಡಿಸಿಕೊಂಡು ಮುಂದಿನ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ಪ್ರವೀಣ್ ಎಮ್. ಪೂಜಾರಿ ,ಜಿಲ್ಲಾಧ್ಯಕ್ಷರು ,ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ತಿಳಿಸಿದ್ದಾರೆ.


Spread the love