ಬಾಬರಿ ಮಸೀದಿ ಧ್ವಂಸ ದಿನ : ಡಿ. 6ರಂದು ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ

Spread the love

ಬಾಬರಿ ಮಸೀದಿ ಧ್ವಂಸ ದಿನ : ಡಿ. 6ರಂದು ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ

ಮಂಗಳೂರು: ಡಿಸೆಂಬರ್ 6ರಂದು ಬಾಬರಿ ಮಸೀದಿ ಧ್ವಂಸ ಕುರಿತಾದ ವಿಜಯೋತ್ಸವ ಹಾಗೂ ಕರಾಳ ದಿನ ಆಚರಣೆಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆ ವರೆಗೆ ನಿರ್ಬಂಧಕಾಜ್ಞೆ ಹೊರಡಿಸಿ ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಆದೇಶಿಸಿದ್ದಾರೆ.

ಬಾಬರಿ ಮಸೀದಿ ಧ್ವಂಸ ದಿನದ ಪ್ರಯುಕ್ತ ನಗರ ವ್ಯಾಪ್ತಿಯಲ್ಲಿ ಹಲವು ಸಂಘಟನೆಗಳು ಕರಾಳ ದಿನ ಆಚರಿಸುವ ಹಾಗೂ ಸಂಘಪರಿವಾರವು ವಿಜಯೋತ್ಸವ ಆಚರಿಸುವ ಸಾಧ್ಯತೆಗಳಿವೆ. ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯು ಅತಿ ಸೂಕ್ಷ್ಮ ಪ್ರದೇಶವಾಗಿದ್ದು, ಅಂದು ನಡೆಸಲು ಉದ್ದೇಶಿಸಿರುವ ಕಾರ್ಯಕ್ರಮ ಗಳಿಂದ ಸಾರ್ವಜನಿಕ ಶಾಂತಿ ಭಂಗ ಉಂಟಾಗುವ ಸಾಧ್ಯತೆ ಇದೆ. ಅಂದು ನಗರ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಸ್ತೆ ರೋಕೊ ಮತ್ತು ಮುತ್ತಿಗೆ ಮುಂತಾದವುಗಳನ್ನು ನಿರ್ಬಂಧಿಸಲಾಗಿದೆ. ಶಾಂತಿ ಸುವ್ಯವಸ್ಥೆಗೆ ಭಂಗ ಬರುವಂತಹ ಘಟನೆಗಳು ನಡೆಯದಂತೆ ತಡೆಗಟ್ಟುವ ಸಲುವಾಗಿ ಕರ್ನಾಟಕ ಪೊಲೀಸ್ ಕಾಯ್ದೆ 1993 ಕಲಂ 35ರ ಅನ್ವಯ ನಿರ್ಬಂಧಕಾಜ್ಞೆ ಹೊರಡಿಸಿ ಆದೇಶಿಸಲಾಗಿದೆ.


Spread the love