ಬಾರ್ ಗಳ ಮೇಲೆ ಅಬಕಾರಿ ಅಧಿಕಾರಿಗಳ ದಿಢೀರ್ ದಾಳಿ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ಆಹಾರ ಪೂರೈಸುವ ಬಾರ್ಗಳ ಮೇಲೆ ಬುಧವಾರ ರಾತ್ರಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಬಾರ್ಗೆ ಆಗಮಿಸಿದವರ ಗುರುತಿನ ಚೀಟಿ ತಪಾಸಣೆ ನಡೆಸಲಾಯಿತು. ಅಪ್ರಾಪ್ತ ವಯಸ್ಕರಿಗೆ ಮದ್ಯ ಪೂರೈಸದಂತೆ ಸನ್ನದುದಾರರಿಗೆ ಸೂಚನೆ ನೀಡಲಾಯಿತು. ಮದ್ಯ ಪೂರೈಸಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಬಕಾರಿ ಅಧಿಕಾರಿಗಳು ಎಚ್ಚರಿಸಿದರು.
ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ನಿರ್ದೇಶನದಂತೆ ದಾಳಿಯಲ್ಲಿ ಮಂಗಳೂರು ಉಪವಿಭಾಗ 1 ರ ಉಪ ಅಧೀಕ್ಷಕಿ ಗಾಯತ್ರಿ ಸಿ ಹೆಚ್ ಅವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರಾದ ಚೇತನ್ ಕುಮಾರ್, ಪ್ರತಿಭಾ, ಮಿಲ್ಲರ್ ಜಾನ್ಸನ್ ಡಿಸೋಜ, ಕಮಲ, ದತ್ತಗುರು, ಉಪನಿರೀಕ್ಷಕರಾದ ರಜಾಕ್, ಜಯಪ್ಪ ಹಾಗೂ ಪೇದೆಗಳಾದ ಸಂದೀಪ್, ಸಂಧ್ಯಾ, ಶಿವಲಿಂಗಪ್ಪ, ಆನಂದ್, ಮಂಜಪ್ಪ, ದೇವರಾಜ್ ಪಾಲ್ಗೊಂಡಿದ್ದರು.













