ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ನೇಮಕ

Spread the love

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ನೇಮಕ

ನವದೆಹಲಿ: ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕಗೊಳಿಸಲಾಗಿದೆ.

ನಳಿನ್ ಕುಮಾರ್ ಕಟೀಲ್ ಹುಟ್ಟಿದ್ದು 1966ರ ಫೆಬ್ರವರಿ 7 ರಂದು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಈಗ ಸತತ 3ನೇ ಬಾರಿಗೆ ಭಾರತೀಯ ಜನತಾ ಪಾರ್ಟಿಯಿಂದ ಗೆದ್ದು ಲೋಕಸಭೆಗೆ ಆಯ್ಕೆಯಾಗಿದ್ದಾರೆ.

ನಳಿನ್ ಕುಮಾರ್ ಕಟೀಲ್ ತಮ್ಮ ಸಾರ್ವಜನಿಕ ಜೀವನ ಆರಂಭ ಮಾಡಿದ್ದು ರಾಷ್ಟ್ರೀಯ ಸ್ವಯಂ ಸಂಘದ ಪ್ರಚಾರಕರಾಗಿ. ತಮ್ಮ 18ನೇ ವಯಸ್ಸಿನಲ್ಲೇ ಪ್ರಚಾರಕರಾದ ನಳಿನ್ ಕುಮಾರ್ ಕಟೀಲ್ ಸುಮಾರು 12 ವರ್ಷಗಳ ಕಾಲ ಸಂಘದ ಪ್ರಚಾರಕರಾಗಿ ಸೇವೆ ಸಲ್ಲಿಸಿದ್ದಾರೆ.  2009ರಲ್ಲಿ ಪಕ್ಷ ಸಂಘಟನೆಯಲ್ಲಿ ಇವ್ರ ಸೇವೆ ಗುರುತಿಸಿದ ಹೈಕಮಾಂಡ್ ಲೋಕಸಭೆಗೆ ಸ್ಪರ್ಧಿಸೋಕೆ ಟಿಕೆಟ್ ನೀಡಿತ್ತು. ಆಗ ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿದ ನಳೀನ್ ಕುಮಾರ್ ಕಟೀಲ್ ನಂತ್ರ 2014 ಹಾಗೂ 2019ರ ಲೋಕಸಭಾ ಚುನಾವಣೆಯಲ್ಲೂ ಗೆದ್ದು ಈಗ 3ನೇ ಬಾರಿ ಲೋಕಸಭೆ ಪ್ರವೇಶಿಸಿದ್ದಾರೆ.


Spread the love