ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ನೂತನ ಕಾರ್ಯಕಾರಿಣಿ ಸಮಿತಿ ಪದ ಪ್ರದಾನ

Spread the love

ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ನೂತನ ಕಾರ್ಯಕಾರಿಣಿ ಸಮಿತಿ ಪದ ಪ್ರದಾನ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಯುವ ಮೋರ್ಚಾದ ನೂತನ ಕಾರ್ಯಕಾರಿಣಿ ಸಮಿತಿಯ ಪದ ಪ್ರದಾನ ಸಮಾರಂಭವು ಉಡುಪಿ ನಗರ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ನೂತನ ಯುವ ಮೋರ್ಚಾದ ಅಧ್ಯಕ್ಷರಾಗಿ ರೋಶನ್ ಎ ಶೆಟ್ಟಿ , ಪ್ರಧಾನ ಕಾರ್ಯದರ್ಶಿಯಾಗಿ ಸುಶಾಂತ್ ಪೂಜಾರಿ , ಉಪಾದ್ಯಕ್ಷರುಗಳಾಗಿ ವಿಜಯ್ ಭಟ್ ಹಾಗು ಕಾರ್ಯಕಾರಿಣಿ ಸದಸ್ಯರುಗಳು ಮತ್ತು ಯುವ ಮೋರ್ಚಾದ ಮಹಾಶಕ್ತಿ ಕೇಂದ್ರಗಳ ಪದಾಧಿಕಾರಿಗಳು ಪದಪ್ರದಾನ ಗೊಂಡರು.

ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಯಶಪಾಲ್ ಸುವರ್ಣ, ಜಿಲ್ಲಾ ಯುವ ಮೋರ್ಚಾ ಪ್ರದಾನ ಕಾರ್ಯದರ್ಶಿ ಅಕ್ಷಿತ್ ಶೆಟ್ಟಿ, ಶರತ್ ಬೈಂದೂರು, ನಗರ ಬಿಜೆಪಿ ಪ್ರದಾನ ಕಾರ್ಯದರ್ಶಿ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ, ಮತ್ತಿತರರು ಉಪಸ್ಥಿತರಿದ್ದರು.


Spread the love