ಬಿಜೆಪಿ ಎರಡನೇ ಪಟ್ಟಿ ರಿಲೀಜ್; ಬೈಂದೂರಿಗೆ ಸುಕುಮಾರ್ ಶೆಟ್ಟಿ, ಉಡುಪಿ, ಕಾಪು ಅಭ್ಯರ್ಥಿಗಳ ಹೆಸರು ಇನ್ನೂ ನಿಘೂಡ

Spread the love

ಬಿಜೆಪಿ ಎರಡನೇ ಪಟ್ಟಿ ರಿಲೀಜ್; ಬೈಂದೂರಿಗೆ ಸುಕುಮಾರ್ ಶೆಟ್ಟಿ, ಉಡುಪಿ, ಕಾಪು ಅಭ್ಯರ್ಥಿಗಳ ಹೆಸರು ಇನ್ನೂ ನಿಘೂಡ

ಉಡುಪಿ: ಮೇ 12 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಎರಡನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಮೊದಲ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯ ಎರಡು ಕ್ಷೇತ್ರಗಳಾದ ಕುಂದಾಪುರ ಮತ್ತು ಕಾರ್ಕಳ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದರೆ ಎರಡನೇ ಪಟ್ಟಿಯಲ್ಲಿ ಕೇವಲ ಉಡುಪಿ ಜಿಲ್ಲೆಯ ಬೈಂದೂರಿಗೆ ಮಾತ್ರ ಅವಕಾಶ ಕೊಡಲಾಗಿದೆ.

ಅತಿ ಕುತೂಹಲ ಕೆರಳಿಸಿದ ಉಡುಪಿ ಮತ್ತು ಕಾಪು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಎರಡನೇ ಪಟ್ಟಿಯಲ್ಲಿ ಇಲ್ಲದೆ ಇರುವುದು ಎರಡೂ ಕ್ಷೇತ್ರಗಳ ಕಾರ್ಯಕರ್ತರಲ್ಲಿ ನಿರಾಶೆ ಮೂಡಿಸಿದೆ.


Spread the love