ಬಿಜೆಪಿ ಕರ್ಮಕಾಂಡಗಳ ವಿರುದ್ದ ಜನಜಾಗೃತಿ ಆಂದೋಲನ: ಅಶೋಕ್ ಕುಮಾರ್ ಕೊಡವೂರು

Spread the love

ಬಿಜೆಪಿ ಕರ್ಮಕಾಂಡಗಳ ವಿರುದ್ದ ಜನಜಾಗೃತಿ ಆಂದೋಲನ: ಅಶೋಕ್ ಕುಮಾರ್ ಕೊಡವೂರು

ಉಡುಪಿ: ಸರಕಾರದಿಂದ 1200 ಎಕ್ರೆ ಜಮೀನು ಪಡೆದ ಸುಜ್ಲಾನ್ ಕಂಪೆನಿ ಈಗ ನಷ್ಟ ಹೊಂದಿದ್ದು ಈ ಸ್ಥಳವನ್ನು ಸರಕಾರಕ್ಕೆ ಹಿಂದಿರುಗಿಸದೆ ಖಾಸಗಿ ವ್ಯಕ್ತಿಗಳಿಗೆ ದುಬಾರಿ ಬೆಲೆಗೆ ಮಾರಾಟ ಮಾಡಿದ ಅವ್ಯವಹಾರದ ವಿರುದ್ದ ಡಿಸೆಂಬರ್ 23 ರಂದರು ಕಂಪೆನಿಯ ಎದುರು ಬೃಹತ್ ಸಾರ್ವಜನಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದರು.

ಅವರು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜರುಗಿದ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ ಡಿಸೆಂಬರ್ 26 ರಂದು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಬೈಂದೂರು ಕ್ಷೇತ್ರದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯ ಹೆಚ್ಚಿನ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ ಜನಸಾಮಾನ್ಯರ ಕೂಗಿಗೆ ಕಾಂಗ್ರೆಸ್ ಸದಾ ಸ್ಪಂದಿಸುತ್ತದೆ ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ. ಹಿಂದೂಗಳ ಭಾವನೆಗೆ ಧಕ್ಕೆಯಾದ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಹಗರಣ ಹಾಗೂ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಅವ್ಯವಹಾರ ಪ್ರಕರಣ ತನಿಖಾ ಹಂತದಲ್ಲಿದೆ. ಈಗ ಸುಜ್ಲಾನ್ ಕಂಪೆನಿಯ ಭೂ ಅವ್ಯವಹಾರದ ಬಗ್ಗೆ ಬೃಹತ್ ಜನಾಂದೋಲನ ಹಮ್ಮಿಕೊಳ್ಳಲಾಗಿದೆ. ಬಿಜೆಪಿಯ ಈ ಎಲ್ಲಾ ಕರ್ಮಕಾಂಡಗಳ ವಿರುದ್ದ ಜನ ಜಾಗೃತಿ ಉಂಟು ಮಾಡಲು ಜನಾಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು.

ಪಕ್ಷದ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ ಮುಂಬರುವ ನಗರಸಭೆಯ ಪೆರಂಪಳ್ಳಿ ವಾರ್ಡಿನ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದು ಶ್ರುತಿಯವರನ್ನು ಆಯ್ಕೆ ಮಾಡಿದ್ದು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ಪಕ್ಷದ ಅಭ್ಯರ್ಥಿ ಜಯಗಳಿಸಲು ಎಲ್ಲಾ ಕಾರ್ಯಕರ್ತರು ತೊಡಗಿಸಿಕೊಳ್ಳುವಂತೆ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಾಯಕರಾದ ವೆರೋನಿಕಾ ಕರ್ನೆಲಿಯೋ, ದಿನೇಶ್ ಪುತ್ರನ್, ಬಿ ನರಸಿಂಹ ಮೂರ್ತಿ, ಮಹಾಬಲ ಕುಂದರ್, ಹರೀಶ್ ಕಿಣಿ, ಪ್ರಖ್ಯಾತ್ ಶೆಟ್ಟಿ, ಡಾ. ಸುನೀತಾ ಶೆಟ್ಟಿ, ಜ್ಯೋತಿ ಹೆಬ್ಬಾರ್, ರೋಶನಿ ಒಲಿವೇರಾ, ರಮೇಶ್ೆ ಕಾಂಚನ್, ಗಣೇಶ್ ನೆರ್ಗಿ, ವಿಶ್ವಾಸ್ ಅಮೀನ್, ಸತೀಶ್ ಕೊಡವೂರು, ಸೌರಭ್ ಬಲ್ಲಾಳ್, ಸುನೀಲ್ ಬಂಗೇರಾ ಹಾಗೂ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ ಕುಶಲ ಶೆಟ್ಟಿ ಸ್ವಾಗತಿಸಿ, ಅಣ್ಣರಯ್ಯ ಸೇರಿಗಾರ್ ಧನ್ಯವಾದವಿತ್ತರು. ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಕಾರ್ಯಕ್ರಮ ನಿರೂಪಿಸಿದರು.


Spread the love