ಬಿಡದಿ ಟೌನ್‌ ಶಿಪ್ ಯೋಜನೆ ವಿರೋಧಿಸಿ ಪಾದಯಾತ್ರೆ: ದಕ್ಷಿಣ ಕನ್ನಡ ಯುವ ಜೆಡಿಎಸ್‌ ಕಾರ್ಯಕರ್ತರು ಭಾಗಿ

Spread the love

ಬಿಡದಿ ಟೌನ್‌ ಶಿಪ್ ಯೋಜನೆ ವಿರೋಧಿಸಿ ಪಾದಯಾತ್ರೆ: ದಕ್ಷಿಣ ಕನ್ನಡ ಯುವ ಜೆಡಿಎಸ್‌ ಕಾರ್ಯಕರ್ತರ ಭಾಗಿ

ಮಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ನಡೆದ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನಾ ಹೋರಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

 ದಕ್ಷಿಣ ಕನ್ನಡ ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಬಿಡದಿ ಟೌನ್‌ಶಿಪ್ ಯೋಜನೆಯಿಂದ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಈ ಹೋರಾಟವನ್ನು ಆಯೋಜಿಸಲಾಗಿತ್ತು.

ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಯುವ ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಯುವ ಜೆಡಿಎಸ್‌ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ರತೀಶ್ ಕರ್ಕೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಯುವ ಜೆಡಿಎಸ್‌ ಪದಾಧಿಕಾರಿಗಳಾದ ವಿನಿತ್ ಪೂಜಾರಿ, ಸುಶಾಂತ್ ಪೂಜಾರಿ, ನಿಶಾಂತ್, ಪ್ರೀತೇಶ್ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love
Subscribe
Notify of

0 Comments