ಬಿ.ಸಿ. ರೋಡಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

Spread the love

ಬಿ.ಸಿ. ರೋಡಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರು: ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಯುವಕನೋರ್ವನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಬಿ.ಸಿ.ರೋಡಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಹಲ್ಲೆಗೆ ಒಳಗಾಗಿರುವ ಯುವಕನನ್ನು ಶರತ್ (30) ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ ಶರತ್ ಅವರು ಅಂಗಡಿಯಿಂದ ಹೊರಬರುತ್ತಿದ್ದ ವೇಳೆ ಹೆಲಲ್ಮೆಟ್ ಧರಿಸಿಕೊಂಡು ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಶರತ್ ಮೇಲೆ ಮಾರಾಕಾಸ್ತ್ರಗಳಿಂದ ಧಾಳಿ ನಡೆಸಿ ಪರಾರಿಯಾಗಿದ್ದಾರೆ, ಧಾಳಿಯ ಪರಿಣಾಮ ಶರತ್ ಅವರ ತಲೆಗೆ ಗಂಭೀರ ಏಟು ತಗಲಿದ್ದು ತುಂಬೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳೀದು ಬಂದಿದೆ.

ತಾಲೂಕಿನಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು ಈ ನಡುವೆ ಹಲ್ಲೆಯ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ, ಎಎಸ್ಪಿ ವಿಷ್ಣುವರ್ಧನ್ ಸಹಿತ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.


Spread the love