ಬೂತ್‍ ಮಟ್ಟದಲ್ಲಿ ಪಕ್ಷ ಸಂಘಟಿಸಲು ಕಾರ್ಯಪ್ರವೃತ್ತರಾಗೋಣ : ಯಶ್‍ಪಾಲ್ ಸುವರ್ಣ

Spread the love

ಬೂತ್‍ ಮಟ್ಟದಲ್ಲಿ ಪಕ್ಷ ಸಂಘಟಿಸಲು ಕಾರ್ಯಪ್ರವೃತ್ತರಾಗೋಣ : ಯಶ್‍ಪಾಲ್ ಸುವರ್ಣ

ಉಡುಪಿ: ಮುಂಬರುವ ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಭವಿಷ್ಯದ ಎಲ್ಲಾ ಚುನಾವಣೆಗಳಿಗೆ ತಳಹದಿಯಾಗಲಿದ್ದು, ಇಂದಿನಿಂದಲೇ ಬೂತ್‍ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ ತಳಮಟ್ಟದ ಕಾರ್ಯಕರ್ತರಿಗೆ ಶಕ್ತಿ ತುಂಬುವ ಮೂಲಕ ಪಕ್ಷವನ್ನು ಬಲಪಡಿಸಲು ಎಲ್ಲರೂ ಕಾರ್ಯಪ್ರವೃತ್ತರಾಗೋಣ ಎಂದು ಕಾಪು ಬಿಜೆಪಿ ನೂತನ ಪ್ರಭಾರಿ ಯಶ್‍ಪಾಲ್ ಸುವರ್ಣ ಹೇಳಿದರು.

ಕಾಪು ಬಿಜೆಪಿ ಕಛೇರಿಯಲ್ಲಿ ನಡೆದ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಡಲದ ಅಧ್ಯಕ್ಷ ಶ್ರೀಕಾಂತ ನಾಯಕ್ ಮಾತನಾಡಿ ಜಿಲ್ಲಾ ಬಿಜೆಪಿಯ ಸೂಚನೆಯಂತೆ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ, ದೀನ್ ದಯಾಳ್ ಜಯಂತಿ ಹಾಗೂ ಗಾಂಧಿ ಜಯಂತಿ ಅಂಗವಾಗಿ 3 ವಾರಗಳ ಕಾಲ ಕ್ಷೇತ್ರದಾದ್ಯಂತ ನಿರಂತರ ಸೇವಾ ಸಪ್ತಾಹ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾಪು ಬಿಜೆಪಿ ನೂತನ ಪ್ರಭಾರಿಯಾಗಿ ನಿಯುಕ್ತಿಗೊಂಡ ಯಶ್‍ಪಾಲ್ ಸುವರ್ಣ, ಉಡುಪಿ ತಾಲೂಕು ಪಂಚಾಯತ್ ನೂತನ ಅಧ್ಯಕ್ಷರಾದ  ಸಂಧ್ಯಾ ಕಾಮತ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ  ಶಿಲ್ಪಾ ಸುವರ್ಣ, ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷರಾದ   ವೀಣಾ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾದ  ಸುರೇಂದ್ರ ಪಣಿಯೂರು ಜಿಲ್ಲಾ ಮಹಿಳಾ ಮೋರ್ಚಾ ಉಸ್ತುವಾರಿ   ಗೀತಾಂಜಲಿ ಸುವರ್ಣ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ  ರಮಾಕಾಂತ್ ದೇವಾಡಿಗ ರವರನ್ನು ಜಿಲ್ಲಾ ಬಿಜೆಪಿ ನಿಕಟಪೂರ್ವ ಉಪಾಧ್ಯಕ್ಷರಾದ ಸುರೇಶ್ ಶೆಟ್ಟಿ ಗುರ್ಮೆ ಸನ್ಮಾನಿಸಿದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ  ಶೀಲಾ ಕೆ ಶೆಟ್ಟಿ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ   ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರೈತ ಮೋರ್ಚಾದ ಅಧ್ಯಕ್ಷರಾದ  ಪ್ರವೀಣ್ ಗುರ್ಮೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ   ಗೋಪಾಲ ಕೃಷ್ಣ,   ಅನಿಲ್ ಶೆಟ್ಟಿ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪುರಸಭೆ ಸದಸ್ಯರು ಮತ್ತು ವಿವಿಧ ಮೋರ್ಚಾಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love