Home Mangalorean News Kannada News ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

Spread the love

ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಬೃಹತ್ ಪ್ರಮಾಣದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕದ್ರಿ ಠಾಣೆಯ ಪೋಲಿಸರು ಶನಿವಾರ ಬಂಧಿಸಿದ್ದಾರೆ.

ಬಂಧಿತರನ್ನು ಹಾಸನ ಜಿಲ್ಲೆ ಬೇಲೂರು ನಿವಾಸಿ ರಘು (36) ಮತ್ತು ಪ್ರಕಾಶ್ (26) ಎಂದು ಗುರುತಿಸಲಾಗಿದೆ.

ಶನಿವಾರ ಮಂಗಳೂರು ಕದ್ರಿ ಠಾಣೆಯ ಪೋಲಿಸ್ ನಿರೀಕ್ಷಕರಿಗೆ ದೊರೆತ ಮಾಹಿತಯಂತೆ ಆಂದ್ರ ಪ್ರದೇಶದಿಂದ ಹಾಸನ ಕಡೆಯಿಂದ ಮಾರುತಿ 800 ಕಾರಿನಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇಲೆ ಪೋಲಿಸರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 3.30 ಲಕ್ಷ ಮೌಲ್ಯದ 11 ಕೆಜಿ 70 ಗ್ರಾಂ ತೂಕ ಗಾಂಜಾ ಮತ್ತು ಎರಡು ಮೊಬೈಲ್ ಫೋನ್ಹಾಗೂ ಸುಮಾರು 50000 ಮೌಲ್ಯದ ಮಾರುತಿ 800 ಕಾರನ್ನು ವಶಪಡಿಸಿಕೊಂಡಿದ್ದಾರೆ.


Spread the love

Exit mobile version