Home Mangalorean News Kannada News ಬೆಂಗಳೂರು ಕಾಲ್ತುಳಿತ: ಸಿಎಂ ರಾಜಕೀಯ ಕಾರ್ಯದರ್ಶಿಗೆ ಗೇಟ್‌ಪಾಸ್‌; ಗುಪ್ತಚರ ಇಲಾಖೆ ಎಡಿಜಿಪಿ  ನಿಂಬಾಳ್ಕರ್ ವರ್ಗಾವಣೆ

ಬೆಂಗಳೂರು ಕಾಲ್ತುಳಿತ: ಸಿಎಂ ರಾಜಕೀಯ ಕಾರ್ಯದರ್ಶಿಗೆ ಗೇಟ್‌ಪಾಸ್‌; ಗುಪ್ತಚರ ಇಲಾಖೆ ಎಡಿಜಿಪಿ  ನಿಂಬಾಳ್ಕರ್ ವರ್ಗಾವಣೆ

Spread the love

ಬೆಂಗಳೂರು ಕಾಲ್ತುಳಿತ: ಸಿಎಂ ರಾಜಕೀಯ ಕಾರ್ಯದರ್ಶಿಗೆ ಗೇಟ್‌ಪಾಸ್‌; ಗುಪ್ತಚರ ಇಲಾಖೆ ಎಡಿಜಿಪಿ  ನಿಂಬಾಳ್ಕರ್ ವರ್ಗಾವಣೆ

ಬೆಂಗಳೂರು: ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿದ್ದ ಗೋವಿಂದರಾಜ್‌ ಅವರಿಗೆ  ಹುದ್ದೆಯಿಂದ ತಕ್ಷಣವೇ ಬಿಡುಗಡೆ ಮಾಡಿ ಆದೇಶ ಮಾಡಲಾಗಿದೆ. ಜತೆಗೆ ಕರ್ನಾಟಕ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್‌ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

18 ನೇ ಐಪಿಎಲ್‌ ಟೂರ್ನಿ ಕಪ್‌ ಗೆದ್ದಿದ್ದ ಆರ್‌ಸಿಬಿ ತಂಡವು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ವಿಜಯೋತ್ಸವ ಹಮ್ಮಿಕೊಂಡಾಗ ಕಾಲ್ತುಳಿತವಾಗಿ 11 ಮಂದಿ ಮೃತಪಟ್ಟು, 47 ಮಂದಿ ಗಾಯಾಳುಗಳಾಗಿದ್ದವು. ಈ ಘಟನೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಗುರುವಾರ ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿದಂತೆ ಪೊಲೀಸ್‌ ಇಲಾಖೆಯ ಹಲವರನ್ನು ವರ್ಗಾವಣೆ ಮಾಡಲಾಗಿತ್ತು. ಈ ಬೆನ್ನಲ್ಲೆ ಈಗ ಸಿಎಂ ರಾಜಕೀಯ ಕಾರ್ಯದರ್ಶಿ, ಗುಪ್ತಚರ ಇಲಾಖೆ ಮುಖ್ಯ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.


Spread the love

Exit mobile version