‘ಬೆಂಗಳೂರು ಬಂದ್’ ಸಂವಿಧಾನ ಬಾಹಿರ: ಕರ್ನಾಟಕ ಹೈಕೋರ್ಟ್

Spread the love

‘ಬೆಂಗಳೂರು ಬಂದ್’ ಸಂವಿಧಾನ ಬಾಹಿರ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಫೆಬ್ರವರಿ 4 ರಂದು ವಿವಿಧ ಸಂಘಟನೆಗಳು ಕರೆ ನೀಡಿರುವ ‘ಬೆಂಗಳೂರು ಬಂದ್’ ಸಂವಿಧಾನ ಬಾಹಿರ ಎಂದು ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ ಅಭಿಪ್ರಾಯಪಟ್ಟಿದೆ.

ರಾಜಾಜಿನಗರದ ಶ್ರದ್ಧಾ ಪೋಷಕರ ಸಂಘ, ನಿಲುಮೆ ಪ್ರತಿಷ್ಠಾನದ ರಾಕೇಶ್ ಶೆಟ್ಟಿ, ಭಾರ್ಗವ ಬಳಗದ ಅಜಿತ್ ಶೆಟ್ಟಿ ಕಿರಾಡಿ ಹಾಕಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಬೆಂಗಳೂರಿನಲ್ಲಿ ಫೆಬ್ರವರಿ ನಾಲ್ಕರಂದು ಯಾವುದೇ ರೀತಿಯಲ್ಲಿ ಸಾರ್ವಜನಿಕರಿಗೆ, ವ್ಯಾಪಾರ ವಹಿವಾಟು ಹಾಗೂ ಸಾರ್ವಜನಿಕ ಸಾರಿಗೆಯಲ್ಲಿ ಯಾವುದೇ ರೀತಿಯ ತೊಂದರೆ ಅಥವಾ ವ್ಯತ್ಯಯ ಆಗದಂತೆ ನೋಡಿಕೊಳ್ಳುವಂತೆ ಕರ್ನಾಟಕ ಸರಕಾರಕ್ಕೆ ಸೂಚಿಸಿತು.

‘ಬೆಂಗಳೂರು ಬಂದ್’ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್ ಜಿ ರಮೇಶ್ ನೇತೃತ್ವದ ವಿಭಾಗೀಯ ಪೀಠ, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಬಂದ್ ಮಾಡುವಂತಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ತೀರ್ಪು ಪಾಲಿಸಲು ಕ್ರಮ ಕೈಗೊಳ್ಳಿ ಮತ್ತು ಜನಜೀವನಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಎಲ್ಲವನ್ನು ಬಂದ್ ಮಾಡಿ ಬೇರೆಯವರಿಗೆ ತೊಂದರೆ ಕೊಡುವುದು ಮೂಲಭೂತ ಹಕ್ಕು ಅಲ್ಲ ಮತ್ತು ಇದು ಸಂವಿಧಾನ ಬಾಹಿರ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.


Spread the love