ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಸಾವು
ಬೆಳ್ತಂಗಡಿ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳ್ತಂಗಡಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸಾನ್ವಿ(17) ಎಂಬಾಕೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಯಶೋಧರ ಶೆಟ್ಟಿ ಅವರ ಪುತ್ರಿ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಸಾನ್ವಿ ಶೆಟ್ಟಿ ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.
ಈಕೆ ತಾಯಿ ರೇಖಾ, ಸಹೋದರ ಸುಹಾನ್ ಅವರನ್ನು ಅಗಲಿದ್ದಾರೆ.