ಬೆಳ್ತಂಗಡಿ: ಆಡು ಮೇಯಿಸುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಯತ್ನ – ಆರೋಪಿ ಬಂಧನ

Spread the love

ಬೆಳ್ತಂಗಡಿ: ಆಡು ಮೇಯಿಸುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಯತ್ನ – ಆರೋಪಿ ಬಂಧನ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಉಜಿರೆಯ ನಿನ್ನಿಕಲ್ಲು ಎಂಬಲ್ಲಿ ಆಡು ಮೇಯಿಸುತ್ತಿದ್ದ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿ ಕೊಯ್ಯೂರು ಗ್ರಾಮದ ನಿವಾಸಿ ಇಕ್ಬಾಲ್ ಸಾದಿಕ್ (27) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿ ಸಂತ್ರಸ್ಥ ಯುವತಿಯು ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಕಡಂಬಿಲ ಎಂಬಲ್ಲಿ ಆಡುಗಳನ್ನು ಮೇಯಿಸಿಕೊಂಡು ಹೋಗುತ್ತಿರುವಾಗ ತಡೆದು ನಿಲ್ಲಿಸಿ ಲೈಂಗಿಕ ದೌರ್ಜನ್ಯವೆಸಗಿದ್ದು, ಯುವತಿ ಪ್ರತಿರೋಧ ತೋರಿದಾಗ ಆಕೆಗೆ ಜೀವಬೆದರಿಕೆಯೊಡ್ಡಿದ್ದು, ಯುವತಿ ನೀಡಿದ ದೂರಿನಂತೆ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.


Spread the love