ಬೆಳ್ತಂಗಡಿ: ಚಿನ್ನದ ಕರಿಮಣಿ ಸರ ಎಳೆದು ಕಳ್ಳತನ: ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ
ಬೆಳ್ತಂಗಡಿ: ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ಕದ್ದ ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹5,000 ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದರೆ ಆರು ತಿಂಗಳ ಹೆಚ್ಚುವರಿ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ತೀರ್ಪು ನೀಡಲಾಗಿದೆ.
ಈ ಪ್ರಕರಣವು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಅ.ಕ್ರ 100/2024, ಕಲಂ 126(2), 309(5), 309(6) BNS ಅಡಿಯಲ್ಲಿ ದಾಖಲಿಸಲಾಗಿತ್ತು. ಪ್ರಕರಣದ ತನಿಖೆ ನಡೆಸಿ, ಠಾಣೆಯ ಪೊಲೀಸ್ ನಿರೀಕ್ಷಕ ಸುಬ್ಬಾಪುರ್ ಮಠ್ ಅವರು ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ವಿಚಾರಣೆಯನ್ನು ನಡೆಸಿದ ಮಾನ್ಯ ನ್ಯಾಯಾಧೀಶ ಶ್ರೀ ಸಂದೇಶ್ ಅವರು ಆರೋಪಿಯ ಮೇಲೆ ಕಳವು ಅಪರಾಧ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸಹಾಯಕ ಸಾರ್ವಜನಿಕ ಅಭಿಯೋಜಕ ಶ್ರೀಮತಿ ಆಶಿತಾ ವಾದ ಹಾಜರಿಸಿದ್ದರು.