ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಂಯೋಜಕರಾಗಿ ಹರೀಶ್ ಕಿಣಿ ನೇಮಕ

Spread the love

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಂಯೋಜಕರಾಗಿ ಹರೀಶ್ ಕಿಣಿ ನೇಮಕ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಆಗಿರುವ ಅಲೆವೂರು ಹರೀಶ್ ಕಿಣಿ ಇವರನ್ನು ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಂಯೋಜಕರಾಗಿ ನೇಮಿಸಲಾಗಿದೆ.

ಪಕ್ಷವನ್ನು ಬೇರು ಮಟ್ಟದಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಬೂತ್ ಹಂತದಿಂದ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಪ್ರತಿ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಉಸ್ತುವಾರಿಗಳನ್ನಾಗಿ/ಸಂಯೋಜಕರಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ನೇಮಕ ಮಾಡಿದ್ದು ಅದರಂತೆ ಹರೀಶ್ ಕಿಣಿ ಅವರನ್ನು ಬೆಳ್ತಂಗಡಿ ಬ್ಲಾಕ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಹರೀಶ್ ಕಿಣಿ ಅವರು ಅಲೆವೂರು ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಕಾಂಗ್ರೆಸಿನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಕೂಡ ಸೇವೆ ಸಲ್ಲಿಸುತ್ತಿದ್ದಾರೆ.

ಡಿಕೆ ಶಿವಕುಮಾರ್ ಅವರು ಜೂನ್ 7 ರಂದು ಕೆ ಪಿಸಿಸಿ ಅಧ್ಯಕ್ಷನಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಮಾರ್ಗಸೂಚಿಗಳನ್ನು ನೀಡಲಾಗಿದೆ. ಪ್ರತಿಯೊಬ್ಬ ಉಸ್ತುವಾರಿಗಳು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಸ್ತುವಾರಿಯ ಜವಾಬ್ದಾರಿಯನ್ನು ವಹಿಸಿಕೊಂಡು ಸ್ಥಳೀಯ ಸಂಸದರು, ಲೋಕಸಭೆ ಅಭ್ಯರ್ಥಿಗಳು, ಶಾಸಕರು, ವಿಧಾನಸಭೆ ಅಭ್ಯರ್ಥಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು/ಮಾಜಿ ಸದಸ್ಯರು, ಅಭ್ಯರ್ಥಿಗಳು ಹಾಗೂ ಎಲ್ಲಾ ಸ್ಥಳೀಯ ಕಾರ್ಯಕರ್ತರುಗಳನ್ನು ಸಂಪರ್ಕಿಸಿ ಪದಗ್ರಹಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ.


Spread the love

4 Comments

  1. Kini-maam Congress-aaa?
    Enchi-sssaaaaaaaaav maarre
    Must be NaMo-DeMo effect.

    Our Modi-G, in his quest to chase a few monkeys away, has effectively set the whole forest on fire. Monkeys have escaped but sheep are on a rudderless boat now.

Comments are closed.