Home Mangalorean News Kannada News ಬೆಳ್ತಂಗಡಿ ಬಳಿ ಕಾರು ಹೋಂಡಾ ಆಕ್ಟಿವಾ ಮಧ್ಯೆ ಅಪಘಾತ: ಫೈನಲ್ ಇಯರ್‌ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ಬೆಳ್ತಂಗಡಿ ಬಳಿ ಕಾರು ಹೋಂಡಾ ಆಕ್ಟಿವಾ ಮಧ್ಯೆ ಅಪಘಾತ: ಫೈನಲ್ ಇಯರ್‌ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

Spread the love

ಬೆಳ್ತಂಗಡಿ ಬಳಿ ಕಾರು ಹೋಂಡಾ ಆಕ್ಟಿವಾ ಮಧ್ಯೆ ಅಪಘಾತ: ಫೈನಲ್ ಇಯರ್‌ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ಬೆಳ್ತಂಗಡಿ: ಕಾರು ಹಾಗೂ ಸ್ಕೂಟಿ ಮಧ್ಯೆ ನಡೆದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ 21 ವರ್ಷದ ಅನನ್ಯಾ ಎಂದು ಗುರುತಿಸಲಾಗಿದೆ.

ಸ್ಕೂಟರ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಪೃಥ್ವಿ ರಾವ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು.

ಇಬ್ಬರೂ ಬೆಳ್ತಂಗಂಡಿಯಿಂದ ಕಾಲೇಜಿಗೆ ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ವ್ಯಾಗನಾರ್ ಕಾರು ಇವರು ಪ್ರಯಾಣಿಸುತ್ತಿದ್ದ ಹೋಂಡಾ ಆಕ್ಟಿವಾಗೆ ಡಿಕ್ಕಿ ಹೊಡೆದ ಪರಿಣಾಮ ಅನನ್ಯಾ ರಸ್ತೆಗೆಸೆಯಲ್ಪಟ್ಟು ಸಾವನ್ನಪ್ಪಿದ್ದಾರೆ ಅವರ ಗೆಳತಿ ಪೃಥ್ವಿ ಸ್ಥಿತಿ ಗಂಭೀರವಾಗಿದೆ. ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಾವಳಕಟ್ಟೆಯಿಂದ ಎನ್‌ಸಿ ರೋಡ್‌ಗೆ ಸಾಗುವ ದಾರಿಯಲ್ಲಿ ಸಿಗುವ ಅಪಾಯಕಾರಿ ತಿರುವಿನಲ್ಲಿ ಈ ದುರಂತ ಸಂಭವಿಸಿದೆ. ಇಲ್ಲಿ ಈ ಹಿಂದೆಯೂ ಅನೇಕ ಅಪಘಾತಗಳು ಸಂಭವಿಸಿವೆ. ಮೃತ ಅನನ್ಯಾ ಅವರು ಕಡಬದ ಸುನೀಲ್ ಎಂಬುವವರ ಪುತ್ರಿ. ಸ್ಕೂಟಿಯಲ್ಲಿದ್ದ ಇನೋರ್ವ ಸವಾರೆ ಪೃಥ್ವಿ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ನಿವಾಸಿಯಾಗಿದ್ದು, ಇಲ್ಲಿನ ಪ್ರಣಮ್ಯ ಸ್ಟುಡಿಯೋದ ಮಾಲೀಕರ ಪುತ್ರಿಯಾಗಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

Exit mobile version