ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಬುಧವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅವರು ಬರೆದುಕೊಂಡಿದ್ದು, ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಮಾಡಿಸಿದ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ಸಣ್ಣಮಟ್ಟಿನ ಜ್ವರ ಬಿಟ್ಟು ಬೇರೆ ಯಾವುದೇ ಲಕ್ಷಣಗಳಿಲ್ಲದೆ ಇರುವುದರಿಂದ ಮನೆಯಲ್ಲಿಯೇ ಶುಶ್ರೂಷೆ ಪಡೆಯುತ್ತಿದ್ದೇನೆ. ಕಳೆದ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆವಹಿಸಿ ಎಂದು ಕೋರುತ್ತೇನೆ. ಎಂದು ತಿಳಿಸಿದ್ದಾರೆ.


Spread the love