Home Mangalorean News Kannada News ಬೆಳ್ತಂಗಡಿ: ಸವಾರರಿಬ್ಬರ ಸಹಿತ ನದಿ ನೀರಿನಲ್ಲಿ ಕೊಚ್ಚಿ ಹೋದ ಸ್ಕೂಟರ್

ಬೆಳ್ತಂಗಡಿ: ಸವಾರರಿಬ್ಬರ ಸಹಿತ ನದಿ ನೀರಿನಲ್ಲಿ ಕೊಚ್ಚಿ ಹೋದ ಸ್ಕೂಟರ್

Spread the love

ಬೆಳ್ತಂಗಡಿ: ಸವಾರರಿಬ್ಬರ ಸಹಿತ ನದಿ ನೀರಿನಲ್ಲಿ ಕೊಚ್ಚಿ ಹೋದ ಸ್ಕೂಟರ್

ಬೆಳ್ತಂಗಡಿ: ಯುವಕರಿಬ್ಬರು ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ರವಿವಾರ ನಡೆದಿದೆ.

ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಅಪಾಯದಿಂದ ಪಾರಾದ ಯುವಕರು.

ಇವರು ಕೆಲಸಕ್ಕೆ ಹೋಗುವಾಗ ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ನದಿಯನ್ನು ಬೈಕ್ ಸಮೇತ ದಾಟುತ್ತಿದ್ದರು. ಈ ವೇಳೆ ನದಿ ನೀರಿನಲ್ಲಿ ಕೊಚ್ಚಿ ಹೋದ ಇವರ ಬೈಕ್ ನದಿ ಬದಿಯಲ್ಲಿ ಅದೃಷ್ಟವಶಾತ್ ಸಿಲುಕಿಕೊಂಡಿದೆ ಎನ್ನಲಾಗಿದೆ.

ಕೂಡಲೇ ಯುವಕರಿಬ್ಬರು ಕೈಗೆ ಸಿಕ್ಕ ಯಾವುದೋ ಬಳ್ಳಿಯ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ಪಾರಾಗಿ ಬದುಕುಳಿದಿದ್ದಾರೆ ಎಂದು ತಿಳಿದು ಬಂದಿದೆ.


Spread the love

Exit mobile version